ನೀರಿಗೆ ಬಿದ್ದ ವೃದ್ದೆಯನ್ನು ಸ್ವತಃ ಬಾವಿಗೆ ಇಳಿದು ರಕ್ಷಣೆ ಮಾಡಿದ ಪೊಲೀಸ್ ಅಧಿಕಾರಿ ಸಹಿತ ಮೂವರು ಅಪತ್ಪಾಂಧವರು!
ಉಡುಪಿ: ವೃದ್ಧೆಯೊರ್ವರು ಮನೆಯ ನೀರಿರುವ ಬಾವಿಯಲ್ಲಿ ಆಕಸ್ಮಿಕವಾಗಿ ಬಿದ್ದು, ಅಸಹಾಯಕ ಸ್ಥಿತಿಯಲ್ಲಿದ್ದರು. ಚಿಂತಾಜನಕ ಸ್ಥಿತಿಯಲ್ಲಿದ್ದ ವೃದ್ಧೆಯನ್ನು ಉಡುಪಿ ನಗರ ಠಾಣೆಯ ಪಿ.ಎಸ್.ಐ-2 ಸದಾಶಿವ ಗವರೋಜಿ, ಅಗ್ನಿಶಾಮಕ ದಳದ ಸಿಬ್ಬಂದಿ ವಿನಾಯಕ ಹಾಗೂ ಸ್ಥಳಿಯ ಆಟೋ ಚಾಲಕ ರಾಜೇಶ್ ನಾಯಕ್ ಇರ್ವರು ಬಾವಿಗಿಳಿದು ರಕ್ಷಿಸಿದ ಘಟನೆಯು ಕುಕ್ಕಿಕಟ್ಟೆ ಮಾರ್ಪಳ್ಳಿಯಲ್ಲಿ ಗುರುವಾರ ನಡೆದಿದೆ.
ತುರ್ತು ಜೀವರಕ್ಷಣೆ ಕಾರ್ಯಚರಣೆಯಲ್ಲಿ ಸಾಹಸ ಮೆರೆದಿರುವ ಜೀವರಕ್ಷಕರಿಗೆ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರು ಅಭಿನಂದನೆ ಸಲ್ಲಿಸಿದ್ದಾರೆ.