ನೂತನ ಶಾಸಕ ಯಲ್ಲಾಪುರದ ಹಿತ್ಲಳ್ಳಿಯ ಶಾಂತಾರಾಮ ಸಿದ್ಧಿಯವರ ಮನೆಗೆ ಸಚಿವ ಕೋಟ ಭೇಟಿ
ಮಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ನೂತನ ನಾಮನಿರ್ದೇಶಿತ ಸದಸ್ಯ ಬುಡಕಟ್ಟು ಸಿದ್ದಿ ಜನಾಂಗದ ಶಾಂತರಾಮ ಸಿದ್ದಿಯವರ ಯಲ್ಲಾಪುರ ಬಳಿಯ ಹಿತ್ಲಳ್ಳಿಯ ಮನೆಗೆ ಹಿಂದೂ ಧಾರ್ಮಿಕ ದತ್ತಿ, ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಭೇಟಿ ನೀಡಿ ಅಭಿನಂದನೆ ಸಲ್ಲಿಸಿದರು.
ಕಡು ಬಡತನದಲ್ಲಿ ಬದುಕಿ ಬಾಳುತ್ತಿದ್ದ ಶಾಂತರಾಮ ಸಿದ್ದಿಯವರನ್ನು ಶಾಸಕರನ್ನಾಗಿ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ರಾಜ್ಯ ಬಿಜೆಪಿ ಅಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್, ಮುಖ್ಯಮಂತ್ರಿಯವರಾದ ಬಿ.ಎಸ್. ಯಡಿಯೂರಪ್ಪನವರ ಸಹಿತ, ನಮ್ಮ ಪಾರ್ಟಿಯ ಸರ್ವರು ಅಭಿನಂದನಾರ್ಹರು ಎಂದು ಸಚಿವ ಕೋಟ ಬಾವುಕರಾಗಿ ನುಡಿದರು