ನೇಜಾರು ಹತ್ಯಾಕಾಂಡ: ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Spread the love

ನೇಜಾರು ಹತ್ಯಾಕಾಂಡ: ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಉಡುಪಿಯ ನೇಜಾರಿನಲ್ಲಿ ಭೀಕರ ಹತ್ಯೆ ಪ್ರಕರಣ ನಡೆದ ಮನೆಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವಾನ ಹೇಳಿದರು.

ಮೃತ ಹಸೀನಾ ಪತಿ ನೂರ್ ಮೊಹಮದ್ ಹಾಗೂ ಅವರ ಮಗ ಆಸಾದ್ ಹಾಗೂ ಕುಟುಂಬದ ಇತರ ಸದಸ್ಯರನ್ನು ಭೇಟಿಯಾದ ಸಚಿವರು ಅವರಿಗೆ ಸಾಂತ್ವನ ಹೇಳಿದರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಉಡುಪಿಯಲ್ಲಿ ಬೆಚ್ಚಿ ಬೀಳುವ ಘಟನೆ ಆಗಿದ್ದು, ಆರೋಪಿ ಕುಟುಂಬದ ನಾಲ್ಕ ಸದಸ್ಯರನ್ನು ಅಮಾನುಷವಾಗಿ ಕೊಂದಿದ್ದಾನೆ, ರಾಕ್ಷಸ ಕೃತ್ಯ ಎಸಗಿದ್ದಾನೆ. ಇಂದು ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದು, ಆರೋಪಿಯನ್ನು ಕ್ಷಿಪ್ರವಾಗಿ ಬಂಧಿಸುವ ಮೂಲಕ ಪೊಲೀಸ್ ಇಲಾಖೆ ಒಳ್ಳೆಯ ಕೆಲಸ ಮಾಡಿದೆ. ನೊಂದ ಕುಟುಂಬಕ್ಕೆ ಆದಷ್ಟು ಬೇಗ ನ್ಯಾಯ ದೊರಕಿಸಲು ಪ್ರಯತ್ನ ಪಡುತ್ತೇವೆ ಎಂದರು.

ಉಡುಪಿ ಜಿಲ್ಲೆ ಶಾಂತಿ ಪ್ರಿಯರ ಜಿಲ್ಲೆ, ಇಂತಹ ಜಿಲ್ಲೆಯಲ್ಲಿ ಹೀಗೆ ಆಗಬಾರದು ಇತ್ತು ಆದರೂ ಆಗಿದೆ. ಮುಂದೆ ಇಂತಹ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಖುತ್ತೇವೆ, ಕಾನೂನು ಸುವ್ಯವಸ್ಥಿತೆ ಕಾಪಾಡುತ್ತೇವೆ. ಆರೋಪಿ ಖಂಡಿತ ಯಾರಿಗೂ ಬೆಳಗಾವಿ ಇದ್ದ ಮಾಹಿತಿ ಇರಲಿಲ್ಲ. ಆರೋಪಿ ಸೈಕೋ ರೀತಿಯಲ್ಲಿ ವರ್ತಿಸಿದ್ದಾನೆ. ಈಗಾಗಲೇ ಆತ ಮೊದಲ ಮದುವೆ ಆಗಿದ್ದಾನೆ. 20 ನಿಮಿಷದಲ್ಲಿ ಕೃತ್ಯ ನಡೆಸಿದ್ದು ಆತನ ಮೆಂಟಲ್ ಸ್ಟೆಟಸ್ ಯಾವ ರೀತಿ ಇರಬಹುದು ಎಂದು ಊಹಿಸಲು ಸಾಧ್ಯವಿಲ್ಲ ಎಂದರು.

ಕುಟುಂಬದ ಸದಸ್ಯರು ಫಾಸ್ಟ್ ಟ್ರಾಕ್ ನ್ಯಾಯಾಲಯದ ಮೂಲಕ ತನಿಖೆಗೆ ಒತ್ತಾಯಿಸಿದ್ದಾರೆ. ಮನೆಯವರು ಒಬ್ಬರ ಹೆಸರು ಕೊಟ್ಟಿದ್ದಾರೆ ಅವರ ಮೂಲಕ ತನಿಖೆ ಮಾಡುತ್ತೇವೆ. ತಾನು ಬೆಳಗಾವಿಯಲ್ಲಿ ಇದ್ದ ಕಾರಣ ಉಡುಪಿಗೆ ಬರುವುದಕ್ಕೆ ವಿಳಂಬವಾಗಿದೆ ಆದರೂ ಅಲ್ಲಿಂದಲೇ ನಾನು ಕುಟುಂಬದ ಹಾಗೂ ಪೊಲೀಸ್ ಇಲಾಖೆಯೊಂದಿಗೆ ಸಂಪರ್ಕದಲ್ಲಿಇದ್ದಿದ್ದೆ ಎಂದರು.

ಈ ವೇಳೆ ಸಚಿವರೊಂದಿಗೆ ಮಾಜಿ ಶಾಸಕ ಗೋಪಾಲ ಪೂಜಾರಿ ನಾಯಕರಾದ ಪ್ರಸಾದ್ ರಾಜ್ ಕಾಂಚನ್, ದೀನೇಶ್ ಹೆಗ್ಡೆ, ರಮೇಶ್ ಕಾಂಚನ್, ಪ್ರಖ್ಯಾತ್ ಶೆಟ್ಟಿ, ಎಮ್ ಎ ಗಫೂರ್, ಸರಳಾ ಕಾಂಚನ್, ಡಾ. ಸುನೀತಾ ಶೆಟ್ಟಿ, ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ, ಜಿಪಂ ಸಿಇಒ ಪ್ರಸನ್ನ ಹೆಚ್, ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ ಅರುಣ್ ಹಾಗೂ ಇತರರು ಉಪಸ್ಥೀತರಿದ್ದರು.


Spread the love