Home Mangalorean News Kannada News ನೇಜಾರು ಹತ್ಯಾಕಾಂಡ ಪ್ರಕರಣ ಭೇದಿಸಿದ ಪೊಲೀಸರ ಕಾರ್ಯವೈಖರಿ ಶ್ಲಾಘನೀಯ – ಪ್ರೀತಿ ಸಾಲಿನ್ಸ್

ನೇಜಾರು ಹತ್ಯಾಕಾಂಡ ಪ್ರಕರಣ ಭೇದಿಸಿದ ಪೊಲೀಸರ ಕಾರ್ಯವೈಖರಿ ಶ್ಲಾಘನೀಯ – ಪ್ರೀತಿ ಸಾಲಿನ್ಸ್

Spread the love

ನೇಜಾರು ಹತ್ಯಾಕಾಂಡ ಪ್ರಕರಣ ಭೇದಿಸಿದ ಪೊಲೀಸರ ಕಾರ್ಯವೈಖರಿ ಶ್ಲಾಘನೀಯ – ಪ್ರೀತಿ ಸಾಲಿನ್ಸ್

ಉಡುಪಿ ಸಮೀಪದ ನೇಜಾರುವಿನಲ್ಲಿ ನಡೆದ ತಾಯಿ ಹಾಗೂಮೂವರು ಮಕ್ಕಳ ಭೀಕರ ಕೊಲೆ ಪ್ರಕರಣದ ಆರೋಪಿಯನ್ನು ಕ್ಷಿಪ್ರವಾಗಿ ಬಂಧಿಸಿದ ಉಡುಪಿ ಜಿಲ್ಲಾ ಪೊಲೀಸರ ಕಾರ್ಯಕ್ಕೆ ಶ್ಲಾಘನೀಯ ಎಂದು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರೀತಿ ಸಾಲಿನ್ಸ್ ಹೇಳಿದ್ದಾರೆ.

ಇಡೀ ಕರಾವಳಿಯನ್ನು ಬೆಚ್ಚಿಬೀಳಿಸಿದ ಪ್ರಕರಣದಿಂದಾಗಿ ಜನತೆ ಅದರಲ್ಲೂ ಮಹಿಳೆಯಲ್ಲಿ ಭಯದ ವಾತಾವರಣವನ್ನು ಸೃಷ್ಠಿ ಮಾಡಿತ್ತು. ಜಿಲ್ಲೆಯ ದಕ್ಷ ಪೋಲಿಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಅವರು ಘಟನೆ ನಡೆದ ಮಾಹಿತಿ ಲಭಿಸಿದ ತಕ್ಷಣ ಸ್ಥಳಕ್ಕೆ ಆಗಮಿಸಿ ಪ್ರಕರಣದ ಕುರಿತು ಮಾಹಿತಿ ಪಡೆದು 5 ತನಿಖಾ ತಂಡಗಳನ್ನು ರಚಿಸಿ ಘಟನೆ ನಡೆದ ಮೂರು ದಿನಗಳ ಒಳಗಡೆ ಆರೋಪಿಯನ್ನು ಹುಡುಕಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಅರುಣ್ ಕೆ. ಹಾಗೂ ಅವರ ತಂಡಕ್ಕೆ ಉಡುಪಿ ಜನತೆಯ ಪರವಾಗಿ ಹಾರ್ದಿಕ ಅಭಿನಂದನೆಗಳು ಸಲ್ಲಿಸುವುದರೊಂದಿಗೆ ಆರೋಪಿಗೆ ಕಠಿಣ ಶಿಕ್ಷೆ ಲಭಿಸಲು ತನಿಖೆ ದಾರಿತಪ್ಪದಂತೆ ಎಚ್ಚರಿಕೆ ವಹಿಸಬೇಕು. ಪೊಲೀಸರ ಪರಿಣಾಮಕಾರಿ ಕಾರ್ಯಾಚರಣೆಗೆ ಮೆಚ್ಚುಗೆ ಸೂಚಿಸುವ ಜೊತೆಗೆ ಮುಂದಿನ ದಿನಗಳಲ್ಲಿ ಇಂತಹ ಭೀಭತ್ಸ ಘಟನೆಗಳು ಶಾಂತಿ ಪ್ರಿಯರ ಜಿಲ್ಲೆ ಉಡುಪಿಯಲ್ಲಿ ಮರುಕಳಿಸದಂತೆ ಸಂಬಂಧಪಟ್ಟ ಇಲಾಖೆಗಳು ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ರೂಪಿಸುವುದು ಸೂಕ್ತ.

ನಗರದೆಲ್ಲೆಡೆ ಸಿಸಿಟಿವಿಗಳು ಸರಿಯಾಗಿ ಕಾರ್ಯಾಚರಿಸುತ್ತಿಲ್ಲ ಎನ್ನುವುದು ಘಟನೆಯ ಬಳಿಕ ಮಾಧ್ಯಮಗಳಲ್ಲಿ ವರದಿಯಾಗಿದೆ. ಎಲ್ಲಾ ಕಡೆ ಸಿ ಸಿ ಕ್ಯಾಮಾರಗಳ ಅಳವಡಿಕೆ ಮಾಡುವುದರಿಂದ ಆದಷ್ಟು ಬೇಗ ಅಪರಾಧಿಗಳನ್ನು ಹಿಡಿಯುವಲ್ಲಿ ಪೋಲಿಸರಿಗೆ ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಸರಕಾರ ಹಾಗೂ ಸಾರ್ವಜನಿಕರು ಪೋಲಿಸರೊಂದಿಗೆ ಕೈಜೋಡಿಸಿದಾಗ ಸಹಕಾರಿಯಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

Exit mobile version