Home Mangalorean News Kannada News ನೇತ್ರಾವತಿ ಸೇತುವೆಯ ಮೇಲೆ ತಕ್ಷಣವೇ ಸಿಸಿ ಕ್ಯಾಮರಾ ಅಳವಡಿಕೆಗೆ ನಿರ್ಧಾರ – ಶಾಸಕ ಕಾಮತ್

ನೇತ್ರಾವತಿ ಸೇತುವೆಯ ಮೇಲೆ ತಕ್ಷಣವೇ ಸಿಸಿ ಕ್ಯಾಮರಾ ಅಳವಡಿಕೆಗೆ ನಿರ್ಧಾರ – ಶಾಸಕ ಕಾಮತ್

Spread the love

ನೇತ್ರಾವತಿ ಸೇತುವೆಯ ಮೇಲೆ ತಕ್ಷಣವೇ ಸಿಸಿ ಕ್ಯಾಮರಾ ಅಳವಡಿಕೆಗೆ ನಿರ್ಧಾರ – ಶಾಸಕ ಕಾಮತ್

ಮಂಗಳೂರು : ನೇತ್ರಾವತಿ ಎರಡೂ ಕಡೆಗಳಲ್ಲಿ ಸುರಕ್ಷತಾ ತಡೆಗೋಡೆ ಅಳವಡಿಕೆಗೆ ಕ್ರಿಯಾ ಯೋಜನೆ ಹಾಗೂ ಸೇತುವೆಯ ಎರಡೂ ಬದಿಗಳಲ್ಲಿ ತಕ್ಷಣವೇ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಸಿಸಿ ಕ್ಯಾಮರಾ ಅಳವಡಿಸಲು ಇಂದಿನ ಸಭೆಯಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ‌ ವೇದವ್ಯಾಸ್ ಕಾಮತ್ ಪ್ರಸ್ತಾವನೆ ಸಲ್ಲಿಸಿ ತಕ್ಷಣವೇ ಕಾರ್ಯರೂಪಕ್ಕೆ ತಂದಿದ್ದಾರೆ.

ಇಂದು ನಡೆದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಮಂಗಳೂರು – ಕೇರಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ನೇತ್ರಾವತಿ ಸೇತುವೆಯಲ್ಲಿ ಹೆಚ್ಚುತ್ತಿರುವ ಅಹಿತಕರ ಘಟನೆಗಳನ್ನು ತಡೆಯವ ನಿಟ್ಟಿನಲ್ಲಿ ಸೇತುವೆಯ ಎರಡು ಕಡೆಗಳಲ್ಲಿ ಸುರಕ್ಷತಾ ತಡೆಗೋಡೆ ಅಳವಡಿಸುವ ಕಾಮಗಾರಿಗೆ ಕ್ರಿಯಾ ಯೋಜನೆ ತಯಾರಿಸಿ ಮುಂದಿನ ತಿಂಗಳು ನಡೆಯುವ ಸಭೆಯಲ್ಲಿ ಅನುಮೋದನೆ ನೀಡುವ ಕುರಿತು ನಿರ್ಧರಿಸಲಾಗಿದೆ. ಹಾಗೂ ತಕ್ಷಣವೇ ಇಕ್ಕೆಲಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಹಾಗೂ ವೆಲೆನ್ಸಿಯಾ ಜಂಕ್ಷನ್`ನಲ್ಲಿರುವ ಪಾರ್ಕನ್ನು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಕಡೆಯಿಂದ ತಕ್ಷಣವೇ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ನಗರದ ಸೌಂದರ್ಯ ಹೆಚ್ಚಿಸಲು ಸಹಕಾರಿಯಾಗುವಂತೆ ಪಾರ್ಕ್ ಅಭಿವೃದ್ಧಿಗೊಳಿಸಲಾಗುವುದು ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ತಿಳಿಸಿದ್ದಾರೆ.

ಸಭೆಯಲ್ಲಿ ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ,ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಶ್ರೀಕಾಂತ್ ರಾವ್, ಪಾಲಿಕೆ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

Exit mobile version