ನೈರುತ್ಯ ಪದವೀಧರರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್ ನಾಮಪತ್ರ ಸಲ್ಲಿಕೆ

Spread the love

ನೈರುತ್ಯ ಪದವೀಧರರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್ ನಾಮಪತ್ರ ಸಲ್ಲಿಕೆ

ಉಡುಪಿ: ಕರ್ನಾಟಕ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ನೈರುತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮಾಜಿ ಶಾಸಕ ಕೆ.ರಘುಪತಿ ಭಟ್ ಗುರುವಾರ ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ನಮ್ಮ ಟಿವಿ ವಾಹಿನಿಯ ವ್ಯವಸ್ಥಾಪಕ ನಿರ್ದೇಶಕ ಡಾ.ಶಿವಚರಣ್ ಶೆಟ್ಟಿ, ಬಿಜೆಪಿಯ ಹಿರಿಯ ಕಾರ್ಯಕರ್ತರಾದ ವಿಶ್ವನಾಥ್ ಭಟ್, ಕೊಡಗು ಜಿಲ್ಲೆಯ ಮುಖಂಡರಾದ ಚೇತನ್ ಮಂದಣ್ಣ, ಶಿವಮೊಗ್ಗದ ಎಂ.ಶಂಕರ್ ಉಪಸ್ಥಿತರಿದ್ದರು.

ನಾಮಪತ್ರ ಸಲ್ಲಿಸುವ ಮೊದಲು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದರು. ಬಳಿಕ ಅವರು ನೂರಾರು ಮಂದಿ ಹಿತೈಷಿಗಳೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು.


Spread the love