Home Mangalorean News Kannada News ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಭೋಜೆಗೌಡ ಗೆಲುವು

ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಭೋಜೆಗೌಡ ಗೆಲುವು

Spread the love

ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಭೋಜೆಗೌಡ ಗೆಲುವು

ಮೈಸೂರು: ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ನ ಮೈತ್ರಿ ಅಭ್ಯರ್ಥಿ ಭೋಜೇಗೌಡ ಗೆಲುವು ಸಾಧಿಸಿದ್ದಾರೆ.

ಮೈಸೂರಿನಲ್ಲಿ ಗುರುವಾರ ನಡೆದ ಮತ ಎಣಿಕೆಯಲ್ಲಿ ಮೊದಲ ಪ್ರಾಶಸ್ತ್ಯದಲ್ಲೇ ಗೆಲುವು ಸಾಧಿಸಿದ್ದು 5267 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಒಟ್ಟು 19,479 ಮತಗಳು ಚಲಾವಣೆ ಆಗಿದ್ದು, ಅದರಲ್ಲಿ 18658 ಮತ ಸಿಂಧುವಾಗಿದ್ದು ಅಸಿಂಧು ಮತಗಳ ಸಂಖ್ಯೆ 821 ಆಗಿದೆ

ಭೋಜೆಗೌಡ ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ. ಮಂಜುನಾಥ್ ಗೆ 4562 ಮತಗಳನ್ನು ಪಡೆದಿರುತ್ತಾರೆ.

ಜಯಗಳಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಜೆಡಿಎಸ್ ಅಭ್ಯರ್ಥಿ ಎಸ್​ಎಲ್​ ಭೋಜೇಗೌಡ, ಈ ಬಾರಿ ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಬಹಳ ಅಭೂತಪೂರ್ವ ಗೆಲುವನ್ನು ತಂದು ಕೊಟ್ಟಿದ್ದಾರೆ. ಹಾಗಾಗಿ ಈ ಗೆಲುವನ್ನು ಶಿಕ್ಷಕ ಸಮುದಾಯಕ್ಕೆ ಸರ್ಮಪಿಸುತ್ತೇನೆ. ನಮ್ಮ ಶಿಕ್ಷಕರು ಬಹಳ ಶ್ರಮಪಟ್ಟು ಗೆಲುವನ್ನು ತಂದುಕೊಟ್ಟಿದ್ದಾರೆ. ಬಹಳ ವಿಶ್ವಾಸವಿಟ್ಟು ಮೊದಲ ಪ್ರಾಶಸ್ತ್ಯ ಮತಗಳನ್ನು ನೀಡಿ ಗೆಲ್ಲಿಸಿದ್ದಾರೆ. ಹಾಗಾಗಿ ನನ್ನ ಗೆಲುವನ್ನು ಅವರಿಗೆ ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ.

ಈ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಗೆಲ್ಲುವ ವಿಶ್ವಾಸವಿತ್ತು ಅದರಂತೆಯೇ ಆಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಒಂದಾಗಿದ್ದರಿಂದ ನಮ್ಮ ಬಲ ಹೆಚ್ಚಾಗಿದೆ. ಹೊಂದಾಣಿಕೆ ಕೆಲಸ ಮಾಡಿದೆ. ಕಳೆದ ಬಾರಿಯೇ ನಾನು ಜೆಡಿಎಸ್​ನಿಂದ ಏಕಾಂಗಿಯಾಗಿ ನಿಂತು ಗೆದ್ದಿದ್ದೆ. ಈ ಬಾರಿ ಬಿಜೆಪಿ ಜೊತೆಗಿನ ಹೊಂದಾಣಿಕೆಯಿಂದ ಬಲ ಇನ್ನಷ್ಟು ಹೆಚ್ಚಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಫಲಪ್ರದವಾಗಿದೆ. ಬಿಜೆಪಿ ಜೆಡಿಎಸ್​​ನ ಎಲ್ಲಾ ಹಿರಿಯ ನಾಯಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದಿದ್ದಾರೆ.


Spread the love

Exit mobile version