ನೌಶೀನ್, ಜಲೀಲ್ ಕುಟುಂಬಕ್ಕೆ ಕುಮಾರಸ್ವಾಮಿ ಸಾಂತ್ವನ, ತಲಾ 5 ಲಕ್ಷ ರೂ.ನ ಚೆಕ್ ವಿತರಣೆ
ಮಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ನಗರದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಗುರುವಾರ ನಡೆದ ಹಿಂಸಾಚಾರದ ಸಂದರ್ಭ ಗೋಲಿಬಾರ್ಗೆ ಬಲಿಯಾದ ಬಂದರ್ ಕಂದುಕ ನಿವಾಸಿ ಅಬ್ದುಲ್ ಜಲೀಲ್ ಹಾಗೂ ಕುದ್ರೋಳಿಯ ಯುವಕ ನೌಶೀನ್ ಅವರ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ಬೆಳಗ್ಗೆ ಭೇಟಿ ನೀಡಿದರು.
ಈ ಸಂದರ್ಭ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದ ಮಾಜಿ ಮುಖ್ಯಮಂತ್ರಿ, ತಲಾ ಐದು ಲಕ್ಷ ರೂ.ನ ಚೆಕ್ ವಿತರಿಸಿದರು.
ಈ ಸಂದರ್ಭ ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಬೋಜೇಗೌಡ, ಬಿ.ಎಂ.ಫಾರೂಕ್, ಜೆಡಿಎಸ್ ದ.ಕ. ಜಿಲ್ಲಾಧ್ಯಕ್ಷ ಮುಹಮ್ಮದ್ ಕುಂಞಿ ವಿಟ್ಲ, ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಮತ್ತಿತತರು ಜೊತೆಗಿದ್ದರು.