ನ್ಯಾಯಕ್ಕಾಗಿ ಪ್ರತಿಭಟಿಸಿದ ವಿದ್ಯಾರ್ಥಿಗಳನ್ನು ಥಳಿಸಿದ ಯೋಗಿ ಆದಿತ್ಯನಾಥ್ ಸರ್ಕಾರ ವಜಾಗೆ ಎನ್.ಎಸ್.ಯು.ಐ ಆಗ್ರಹ

Spread the love

ನ್ಯಾಯಕ್ಕಾಗಿ ಪ್ರತಿಭಟಿಸಿದ  ವಿದ್ಯಾರ್ಥಿಗಳನ್ನು ಥಳಿಸಿದ ಯೋಗಿ ಆದಿತ್ಯನಾಥ್  ಸರ್ಕಾರ ವಜಾಗೆ ಎನ್.ಎಸ್.ಯು.ಐ  ಆಗ್ರಹ

ಉಡುಪಿ: ಉತ್ತರ ಪ್ರದೇಶದಲ್ಲಿ ಬಿಜೆಪಿಯ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾದಾಗಿನಿಂದಲೂ ಒಂದಿಲ್ಲೊಂದು ರೀತಿಯಲ್ಲಿ  ರೈತ ವಿರೋಧಿ, ಜನವಿರೋಧಿ ನೀತಿ ಅನುಸರಿಸುತ್ತಿದ್ದು ಇದನ್ನು ಉಡುಪಿ ಜಿಲ್ಲಾ ಎನ್.ಎಸ್.ಯು.ಐ  ತೀವ್ರವಾಗಿ ಖಂಡಿಸಿದೆ.

ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಜಿಲ್ಲಾಧ್ಯಕ್ಷ ಕ್ರಿಸ್ಟನ್ ಡಿ’ಆಲ್ಮೇಡಾ ಅವರು, ಯೋಗಿ ಆದಿತ್ಯನಾಥ್  ಅಲ್ಲಿನ ಜನತೆ ಅವರ ಮೇಲೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದರು. ಆದರೆ ನ್ಯಾಯಯುತವಾಗಿ ಹೋರಾಟ ಮಾಡುತ್ತಿದ್ದ ರೈತರ ಗುಂಡಿನ ಮಳೆ ಸುರಿಸಲಾಯಿತು. ನಂತರ ಯೋಗಿ ಆದಿತ್ಯನಾಥ್ ಪ್ರತಿನಿಧಿಸುವ ಕ್ಷೇತ್ರದಲ್ಲೇ ಆಸ್ವತ್ರೆಯಲ್ಲಿ ಹಸುಳೆಗಳು ಕಣ್ಣುಬಿಡುವ ಮೊದಲೇ ಜೀವ ಕಳೆದುಕೊಂಡವು.

ಈ ಘಟನೆಗಳ ಬಗ್ಗೆ ಪ್ರತಿಕ್ರಿಯಿಸಿದ ಯೋಗಿ ಆದಿತ್ಯನಾಥ್, ಒಬ್ಬ ಮುಖ್ಯಮಂತ್ರಿಯ ಘನತೆಗೆ ತಕ್ಕಂತೆ ಮಾತನಾಡದೆ, ‘ಮಕ್ಕಳು ಸಾಯುವುದೇ ಇಲ್ಲವೇ? ಎಂದು ಪ್ರಶ್ನಿಸಿದ್ದರು.

ಇದೀಗ ಬನರಾಸ್ ಹಿಂದೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ಮಾಡುವ ಸಂದರ್ಭದಲ್ಲಿ ಅವರ ಬೇಡಿಕೆಯನ್ನು ಈಡೇರಿಸುವ ಬದಲು ವಿದ್ಯಾರ್ಥಿಗಳನ್ನು ಪೊಲೀಸರು ಮನಬಂದಂತೆ ಥಳಿಸಿದ್ದಾರೆ. 1200 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಎಫ್‍ಐಆರ್ ದಾಖಲಿಸಿದ್ದು, ಆ  ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಬರೆ ಎಳೆಯುವ ಪ್ರಯತ್ನ ಮಾಡಲಾಗುತ್ತಿದೆ.

ಅಷ್ಟಾದರೂ ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತ್ರ ಜಾಣ ಕಿವುಡು ಪ್ರದರ್ಶಿಸುತ್ತಿರುವುದು ಮಾತ್ರ ನಾಚಿಕೆಗೇಡು. ಬಿಜೆಪಿ ಮುಖಂಡರು ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸರ ಹಲ್ಲೆಯನ್ನು ‘ನಕ್ಸಲರ ಕೈವಾಡ ಇರಬಹುದು’ ‘ಹೊರಗಿನವರ ದುಷ್ಪ್ರೇರಣೆ’ ಎಂದು ತಿಪ್ಪೇ ಸಾರಿಸುವ ಪ್ರಯತ್ನ ಮಾಡುತ್ತಿರುವುದು ಹಾಸ್ಯಾಸ್ಪದ.

ಕೂಡಲೇ  ರಾಷ್ಟ್ರಪತಿಗಳು ಮಧ್ಯೆ ಪ್ರವೇಶಿಸಿ ಉತ್ತರ ಪ್ರದೇಶದ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು. ರೈತರ ಮೇಲಿನ ಗೋಲಿಬಾರ್, ಆಸ್ಪತ್ರೆಯಲ್ಲಿ ನೂರಾರು ಹಸುಳೆಗಳ ಮರಣ ಹಾಗೂ ವಿದ್ಯಾರ್ಥಿಗಳ ಮೇಲೆ ಪೊಲೀಸರ ಹಲ್ಲೆಯನ್ನು ಉನ್ನತ ಮಟ್ಟದತನಿಖೆಗೆ ಒಳಪಡಿಸಬೇಕು ಎಂದುಉಡುಪಿ ಜಿಲ್ಲಾ ಎನ್.ಎಸ್.ಯು.ಐ   ಒತ್ತಾಯಿಸಿದ್ದಾರೆ.


Spread the love