ನ 17: ಉಡುಪಿ ಜಿಲ್ಲೆಯಲ್ಲಿ ಆಹಾರ ಸಚಿವ ಜಮೀರ್ ಅಹ್ಮದ್ ಪ್ರವಾಸ

Spread the love

ನ 17: ಉಡುಪಿ ಜಿಲ್ಲೆಯಲ್ಲಿ ಆಹಾರ ಸಚಿವ ಜಮೀರ್ ಅಹ್ಮದ್ ಪ್ರವಾಸ

ಉಡುಪಿ: ರಾಜ್ಯದ ಆಹಾರ ಮತ್ತು ನಾಗರಿಕ ಸರಬರಾಜು ಗ್ರಾಹಕರ ವ್ಯವಹಾರಗಳು, ಅಲ್ಪ ಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಹಾಗೂ ಹಜ್ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ನವೆಂಬರ್ 17 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

    ನವೆಂಬರ್ 17 ರಂದು ಬೆಳಗ್ಗೆ 10 ಗಂಟೆಗೆ ಕಾಪುವಿನ ಮುಳೂರು ಸುನ್ನಿ ಕೇಂದ್ರಕ್ಕೆ ಭೇಟಿ ನೀಡುವರು.  11 ಕ್ಕೆ ಉಡುಪಿಯ ವಕ್ಫ್ ಮಂಡಳಿಗೆ ಭೇಟಿ ನೀಡಿ, ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿರುವರು. ಮಧ್ಯಾಹ್ನ 12 ರಿಂದ 1 ಗಂಟೆಯ ವರೆಗೆ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಗೆ ಭೇಟಿ ಹಾಗೂ ಸಾರ್ವಜನಿಕರಿಂದ ಅಹವಾಲು ಸ್ವೀಕಾರ, 1.15 ಕ್ಕೆ ಬಿಷಪ್ ಅವರ ಭೇಟಿ, ಮಧ್ಯಾಹ್ನ 2 ಗಂಟೆಗೆ ಕುಂದಾಪುರಕ್ಕೆ ಆಗಮಿಸಿ, ಜುಮ್ಮಾ ಮಸೀದಿಗೆ ಭೇಟಿ ನೀಡುವರು. ಮಧ್ಯಾಹ್ನ 3ಕ್ಕೆ ನಾವುಂದದ ಐಸ್ ಪ್ಲಾಟ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ 4.45 ಕ್ಕೆ ಉಪ್ಪಿನಕೋಟೆ ಬ್ರಹ್ಮಾವರ ಜುಮ್ಮಾ ಮಸೀದಿಗೆ ಭೇಟಿ ನೀಡಿ, ನಂತರ ಮಂಗಳೂರಿಗೆ ತೆರಳುವರು.


Spread the love