ನ. 30: ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟನೆ

Spread the love

ನ. 30: ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟನೆ

ಉಡುಪಿ: ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿಯ ಉದ್ಘಾಟನೆಯು ನವೆಂಬರ್ 30 ರಂದು ಶನಿವಾರ ಸಂಜೆ 3.00 ಗಂಟೆಗೆ ಉಡುಪಿ ತಾಲೂಕು ಪಂಚಾಯತ್ ಕಟ್ಟಡದ ಮೊದಲನೇ ಮಹಡಿಯಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಇವರು ನಡೆಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ವಿಧಾನಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ ಐವನ್ ಡಿಸೋಜಾ, ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಮಾಜಿ ಸಂಸದರು, ಸಚಿವರಾದ ಜಯಪ್ರಕಾಶ್ ಹೆಗ್ಡೆ, ಮಾಜಿ ಶಾಸಕರಾದ ಗೋಪಾಲ್ ಪೂಜಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಮಿಥುನ್ ರೈ, ಲಾವಣ್ಯ ಬಲ್ಲಾಳ್, ಕಾಂಗ್ರೆಸ್ ನಾಯಕರಾದ ಎಮ್.ಎ ಗಫೂರ್, ಮುನಿಯಾಲು ಉದಯ್ ಶೆಟ್ಟಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ಪ್ರಸಾದ್ರಾಜ್ ಕಾಂಚನ್, ದಿನಕರ್ ಹೇರೂರು, ಸಂತೋಷ್ ಕುಲಾಲ್, ಗೀತಾ ವಾಗ್ಲೆ, ಮಮತಾ ಶೆಟ್ಟಿ ಹಾಗೂ ಹಲವು ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ.

ಕರ್ನಾಟಕ ಸರ್ಕಾರದ ಜನಪ್ರಿಯ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಇವುಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಲು ಪ್ರತಿ ತಾಲ್ಲೂಕುಗಳಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯು ರಚಿಸಲಾಗಿದ್ದು ಅದರಂತೆ ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಅವರು ಆಯ್ಕೆಯಾಗಿದ್ದಾರೆ.

ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾಗಿ ಶಬರೀಶ್ ಸುವರ್ಣ, ಉಸ್ತಾದ್ ಸಾದಿಕ್, ಡಾ. ಸಂತೋಷ್ ಕುಮಾರ್, ದಿನೇಶ್ ಜತ್ತನ್ನ, ಪ್ರವೀಣ್ ಕುಮಾರ್ ಹೆಗ್ಡೆ, ಸಂತೋಷ್ ಶೆಟ್ಟಿ, ಮಾಲತಿ ಆಚಾರ್ಯ, ಸುಧಾಕರ್ ಪೂಜಾರಿ, ದಿನೇಶ್ ಪೂಜಾರಿ, ಪ್ರೇಮಲತಾ ಸೋನ್ಸ್, ಗಣೇಶ್ ಶೆಟ್ಟಿಬೆಟ್ಟು, ವಿಜಯ್ ನಾಯ್ಕ್ ಹಾಗೂ ಅರ್ಚನಾ ದೇವಾಡಿಗ ಇವರುಗಳು ಆಯ್ಕೆಯಾಗಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments