ಪಂಚರಾಜ್ಯ ಚುನಾವಣಾ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿ – ಜನಾರ್ದನ ತೋನ್ಸೆ

Spread the love

ಪಂಚರಾಜ್ಯ ಚುನಾವಣಾ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿ – ಜನಾರ್ದನ ತೋನ್ಸೆ

ಉಡುಪಿ: ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಮಧ್ಯಪ್ರದೇಶ ರಾಜಸ್ಥಾನ ಮತ್ತು ಛತ್ತೀಘಡ್‍ನಲ್ಲಿ ಸ್ಪಷ್ಟ ಬಹುಮತ ಪಡೆದು ಸರಕಾರ ರಚಿಸುವ ನಿಟ್ಟಿನಲ್ಲಿ ಸಾಗುತ್ತಿದ್ದು ಈ ಫಲಿತಾಂಶವು ಮುಂಬರುವ 2019ರ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಜನಾರ್ದನ ತೋನ್ಸೆ ಅಭಿಪ್ರಾಯಪಟ್ಟಿದ್ದಾರೆ.

ಚುನಾವಣೆ ನಡೆದ 5 ರಾಜ್ಯಗಳಲ್ಲಿ ಬಿಜೆಪಿಯು ಸೋಲು ಅನುಭವಿಸಿದ್ದು ಕೇಂದ್ರದ ನರೇಂದ್ರ ಮೋದಿ ಸರಕಾರದ ಬಗ್ಗೆ ಜನ ಭ್ರಮನಿರಸನಗೊಂಡಿರುವುದು ಸ್ಪಷ್ಟವಾಗಿ ಗೋಚರಸುತ್ತದೆ. ಕೇಂದ್ರದ ಸುಳ್ಳು ಆಶ್ವಾಸನೆಗಳು, ಈಡೇರದ ಭರವಸೆಗಳು, ರಫೇಲ್‍ನಂಹತ ಭ್ರಷ್ಟಾಚಾರದ ಹಗರಣ, ದೈನಂದಿನ ವಸ್ತುಗಳ ಬೆಲೆ ಏರಿಕೆ ಇವುಗಳಿಂದ ದೇಶದ ಜನ ಬಿಜೆಪಿಯ ಬಗ್ಗೆ ವಿಶ್ವಾಸ ಕಳೆದುಕೊಂಡಿದ್ದು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರವು ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ತೋನ್ಸೆಯವರು ತಿಳಿಸಿದ್ದಾರೆ. ದೇಶದಲ್ಲಿ ಒಟ್ಟು ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು ಇತ್ತೀಚಿಗೆ ರಿಸರ್ವ್ ಬ್ಯಾಂಕ್‍ನ ಗವರ್ನರ್ ಊರ್ಜಿತ್ ಪಟೇಲ್‍ರ ರಾಜೀನಾಮೆಯಿಂದ ಸಾಬೀತಾಗಿದ್ದು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು ಅಧಿಕಾರ ಕಳೆದುಕೊಳ್ಳಲಿದೆ ಎಂದು ತೋನ್ಸೆಯವರು ತಿಳಿಸಿದ್ದಾರೆ.


Spread the love