Home Mangalorean News Kannada News ಪಂಚಾಯತ್ ರಾಜ್ ವ್ಯವಸ್ಥೆ ಬಲವರ್ಧನೆಗೆ ಬೆಂಬಲ- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಪಂಚಾಯತ್ ರಾಜ್ ವ್ಯವಸ್ಥೆ ಬಲವರ್ಧನೆಗೆ ಬೆಂಬಲ- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

Spread the love

ಪಂಚಾಯತ್ ರಾಜ್ ವ್ಯವಸ್ಥೆ ಬಲವರ್ಧನೆಗೆ ಬೆಂಬಲ- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಉಡುಪಿ : ಕರ್ನಾಟಕದ ಪಂಚಾಯತ್ರಾಜ್ ವ್ಯವಸ್ಥೆ ಇಡೀ ದೇಶದಲ್ಲಿಯೇ ಸದೃಢವಾಗಿ ಬೆಳೆದಿರುವ ವ್ಯವಸ್ಥೆಯಾಗಿದೆ. ಇದನ್ನು ಇನ್ನಷ್ಟು ಬಲಪಡಿಸಲು ರಾಜ್ಯ ಸರಕಾರ ಎಲ್ಲ ರೀತಿಯ ಬೆಂಬಲ ನೀಡಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಅವರು ಶನಿವಾರ, ಕೋಟತಟ್ಟ ಗ್ರಾಮ ಪಂಚಾಯತ್ ಹಾಗೂ ಡಾ.ಶಿವರಾಮ ಕಾರಂತರ ಪ್ರತಿಷ್ಠಾನದ ವತಿಯಿಂದ ಶನಿವಾರ ಕೋಟ ವಿವೇಕ ಕಾಲೇಜಿನ ಕ್ರೀಡಾಂಗಣ ದಲ್ಲಿ ಅವಿಭಜಿತ ದ.ಕ. ಜಿಲ್ಲೆಗಳ ಪಂಚಾಯತ್ರಾಜ್ ಮತ್ತು ನಗರ ಸ್ಥಳೀಯಾ ಡಳಿತ ಜನಪ್ರತಿನಿಧಿಗಳ ಹೊಳಪು-2019′ ಕ್ರೀಡೋತ್ಸವ ಮತ್ತು ಸಾಂಸ್ಕøತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಅಧಿಕಾರ ವಿಕೇಂದ್ರೀಕರಣದ ಆಶಯ ಬಹಳ ದೊಡ್ಡದು. ಗ್ರಾಮಸಭೆಗಳ ಮಟ್ಟದಿಂದಲೇ ಆಯಾ ಪ್ರದೇಶಗಳಿಗೆ ಅಗತ್ಯವಾದ ಯೋಜನೆಗಳು ರೂಪು ಗೊಳ್ಳಬೇಕು. ಸ್ಥಳೀಯ ಸಂಸ್ಥೆಗಳಿಗೆ ಆರ್ಥಿಕ ಮತ್ತು ಕಾರ್ಯನಿರ್ವಹಣಾ ಸ್ವಾತಂತ್ರ್ಯ ಇರಬೇಕು , ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು, ತ್ಯಾಜ್ಯ ವಿಲೇವಾರಿ, ರಸ್ತೆಗಳು ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಲು ರಾಜ್ಯ ಸರಕಾರ ಬದ್ಧವಾಗಿದೆ ಎಂದು ಅವರು ತಿಳಿಸಿದರು.

ಪಂಚಾಯತ್ರಾಜ್ ವ್ಯವಸ್ಥೆ ಅಧಿಕಾರ ವಿಕೇಂದ್ರೀಕರಣ ಆಗಿದೆಯೇ ಅಥವಾ ಭ್ರಷ್ಟಾಚಾರದ ವಿಕೇಂದ್ರೀಕರಣ ಆಗಿದೆಯೇ ಎಂಬ ಜಿಜ್ಞಾಸೆಗಳು ನಡೆದಿವೆ. ಗ್ರಾಮ ಮಟ್ಟದಲ್ಲಿ ಯೋಜನೆಗÀಳು ರೂಪುಗೊಳ್ಳುವುದು ಮತ್ತು ಅನುಷ್ಠಾನಗೊಳ್ಳುವುದು ಸರಿಯಾದರೂ ಅವುಗಳ ಸೂಕ್ತ ಮೇಲ್ವಿಚಾರಣೆ ಇಲ್ಲದಿದ್ದರೆ ಉz್ದÉೀಶಗಳು ವಿಫಲವಾಗುವ ಅಪಾಯಗಳಿವೆ. ಆದುದರಿಂದ ಸ್ಥಳೀಯ ಸಂಸ್ಥೆಗಳು ತಳಮಟ್ಟದಿಂದ ಬಲಗೊಳ್ಳಬೇಕು ಎಂದರು.

ಚುನಾಯಿತ ಸದಸ್ಯರು ನಿರ್ದಿಷ್ಟ ಕಾರ್ಯತಂತ್ರದ ಜೊತೆಗೆ ತತ್ಪಾದರ್ಶದ ಚೌಕಟ್ಟನ್ನು ಹಾಕಿಕೊಳ್ಳಬೇಕು. ಸುಧಾರಣೆ, ದಕ್ಷತೆ, ಬದ್ಧತೆ ಮತ್ತು ಫಲಿತಾಂಶ ಆಧಾರಿತ ಅನುಷ್ಠಾನಕ್ಕೆ ಆದ್ಯತೆ ನೀಡಿ ಕೆಲಸ ಮಾಡಿದಾಗ ಮಾತ್ರ ಅಧಿಕಾರ ವಿಕೇಂದ್ರೀಕರಣವನ್ನು ಸಮರ್ಥಿಸಬಹುದಾಗಿದೆ ಎಂದು ಅವರು ಅಭಿಪ್ರಾಯ ಪಟ್ಟರು.

ಗೌರವ ಸ್ವೀಕರಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿ, ಗ್ರಾಮಾಂತರ ಪ್ರದೇ±ದ ಪ್ರತಿ ಮನೆಗಳಲ್ಲೂ ಶೌಚಾಲಯ ನಿರ್ಮಿಸುವ ಕುರಿತು ಸ್ಥಳೀಯಾಡಳಿತದ ಜನಪ್ರತಿನಿಧಿಗಳು ಪ್ರತಿಜ್ಞೆ ಮಾಡಬೇಕು. ಸರಕಾರ ನೀಡಿರುವ 20ಲಕ್ಷ ರೂ. ಬಳಸಿಕೊಂಡು ಪ್ರತಿ ಗ್ರಾಪಂಗಳಲ್ಲಿ ತ್ಯಾಜ್ಯ ವಿಲೇವಾರಿ ಘಟಕಗಳನ್ನು ಸ್ಥಾಪಿಸಬೇಕು. ರಾಜ್ಯದ ಎಲ್ಲ 6021 ಗ್ರಾಪಂ ಕಟ್ಟಡಗಳಿಗೆ ಸೋಲಾರ್ ಆಳವಡಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ. ಅದನ್ನು ಪ್ರತಿಯೊಬ್ಬರು ಅನುಷ್ಠಾನಕ್ಕೆ ತರಬೇಕು ಎಂದು ಹೇಳಿದರು.

ಸಚಿವ ಕೋಟ ಶ್ರೀನಿವಾಸ ಪೂಜಾರಿ ಅತ್ಯುತ್ತಮ ಗ್ರಾಪಂ ಗಳಿಗೆ ಪ್ರಶಸ್ತಿ ಪುರಸ್ಕಾರವನ್ನು ಪ್ರದಾನ ಮಾಡಿದರು. ಮಾಜಿ ಸಚಿವ ಜಯ ಪ್ರಕಾಶ್ ಹೆಗ್ಡೆ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ಜಿಪಂ ಅಧ್ಯಕ್ಷ ದಿನಕರ ಬಾಬು ಕ್ರೀಡಾ ಜ್ಯೋತಿ ಹಸ್ತಾಂತರಿಸಿದರು. ದ.ಕ. ಜಿಪಂ ಅಧ್ಯಕ್ಷೆ ಮೀನಾಕ್ಷಿ ಪ್ರತಿಜ್ಞಾ ವಿಧಿ ಬೋಧಿssಸಿದರು.

ಅಧ್ಯಕ್ಷತೆಯನ್ನು ಕೋಟತಟ್ಟು ಗ್ರಾಪಂ ಅಧ್ಯಕ್ಷ ರಘು ತಿಂಗಳಾಯ ವಹಿಸಿ ದ್ದರು. ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಉಡುಪಿ ಶಾಸಕ ಕೆ.ರಘುಪತಿ ಭಟ್, ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಉಡುಪಿ ತಾಪಂ ಅಧ್ಯಕ್ಷೆ ನೀತಾ ಗುರುರಾಜ ಪೂಜಾರಿ, ತಾಪಂ ಸದಸ್ಯೆ ಜ್ಯೋತಿ ಕುಂದರ್, ಲಲಿತಾ, ಜಿಲ್ಲಾಧಿಕಾರಿ ಜಗದೀಶ್, ಜಿಪಂ ಸಿಇಓ ಪ್ರೀತಿ ಗೆಹ್ಲೊತ್ ಮೊದಲಾದವರು ಉಪಸ್ಥಿತರಿದ್ದರು. ಪ್ರತಿಷ್ಠಾನದ ಗೌರವಾಧ್ಯಕ್ಷ ಆನಂದ ಸಿ. ಕುಂದರ್ ಸ್ವಾಗತಿಸಿದರು. ಸತೀಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಉಡುಪಿ ಹಾಗೂ ದ.ಕ. ಜಿಲ್ಲೆಯ ಒಟ್ಟು 413 ಸ್ಥಳೀಯಾಡಳಿತ ಸಂಸ್ಥೆಗಳ ಜನಪ್ರತಿನಿಧಿಗಳು ಹಾಗೂ ಸಿಬಂದಿ ಪಥಸಂಚಲನದಲ್ಲಿ ಭಾಗವಹಿಸಿದರು. ಸ್ಪರ್ಧೆಯಲ್ಲಿ ಸೂಪರ್ ಮಿನಿಟ್, ಗಾಯನ, ಛದ್ಮವೇಷ, 100 ಮೀಟರ್ ಓಟ, ಗುಂಡು ಎಸೆತ, ರಿಂಗ್ ಇನ್ ದ ವಿಕೆಟ್, ಮಡಕೆ ಒಡೆಯವುದು, ಹಗ್ಗ ಜಗ್ಗಾಟ, ತ್ರೋಬಾಲ್ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳು ಜರಗಿದವು.


Spread the love

Exit mobile version