Home Mangalorean News Kannada News ಪಂಪ್ ವೆಲ್ ಬಳಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಲಾಡ್ಜಿಗೆ ದಾಳಿ : ಆರು ಯುವತಿಯರ ರಕ್ಷಣೆ

ಪಂಪ್ ವೆಲ್ ಬಳಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಲಾಡ್ಜಿಗೆ ದಾಳಿ : ಆರು ಯುವತಿಯರ ರಕ್ಷಣೆ

Spread the love

ಪಂಪ್ ವೆಲ್ ಬಳಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಲಾಡ್ಜಿಗೆ ದಾಳಿ : ಆರು ಯುವತಿಯರ ರಕ್ಷಣೆ

ಮಂಗಳೂರು: ನಗರದ ಪಂಪ್ವೆಲ್ನಲ್ಲಿರುವ ಲಾಡ್ಜ್ವೊಂದಕ್ಕೆ ದಾಳಿ ನಡೆಸಿರುವ ಪೊಲೀಸರು ವೇಶ್ಯಾವಾಟಿಕೆ ದಂಧೆಯಲ್ಲಿ ನಿರತ ಆರೋಪದಲ್ಲಿ ಹಲವರನ್ನು ವಶಕ್ಕೆ ಪಡೆದು, ಆರು ಮಂದಿ ಬಾಂಗ್ಲಾ ಮೂಲದ ಯುವತಿಯರನ್ನು ರಕ್ಷಿಸಿದ ಘಟನೆ ಶುಕ್ರವಾರ ನಡೆದಿದೆ.

ಪಂಪ್ ವೆಲ್ ಬಳೀ ಇರುವ ಅನ್ನಪೂರ್ಣ ಹೊಟೇಲ್ ಹಾಗೂ ಲಾಡ್ಜ್ಗೆ ಇಂದು ಬೆಳಗ್ಗೆ ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ನಿವಾಸಿ ಪವನ್(26) ಎಂಬಾತ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಮುಖ ಆರೋಪಿ ಶಿವರಾಮ ಪೂಜಾರಿ ಎಂಬಾತ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೈಸೂರು ಒಡನಾಡಿ ಸಂಘ ಹಾಗೂ ಚೈಲ್ಡ್ ಲೈನ್ ಸಂಸ್ಥೆ ನೀಡಿದ ಮಾಹಿತಿಯನ್ನಾಧರಿಸಿ ದಾಳಿ ನಡೆಸಿದ್ದಾರೆ. ಹೋಟೆಲ್ನ 3ನೇ ಮಹಡಿಯ ರಹಸ್ಯ ಕೊಠಡಿಯಲ್ಲಿ ಯುವತಿಯರನ್ನು ಕೂಡಿ ಹಾಕಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತೆನ್ನಲಾಗಿದೆ. ಇಂದು ಪೊಲೀಸರು ದಾಳಿ ನಡೆಸಿದ ವೇಳೆ ಆರು ಯುವತಿಯರು ಈ ಕೊಠಡಿಯಲ್ಲಿ ಪತ್ತೆಯಾಗಿದ್ದಾರೆ. ನಾಲ್ವರು ಅಪ್ರಾಪ್ತ ವಯಸ್ಸಿನ ಯುವತಿಯರು ಪರಾರಿಯಾಗಿದ್ದರೆನ್ನಲಾಗಿದೆ.

ದಾಳಿಯ ವೇಳೆ ಬಾಂಗ್ಲಾ ಕರೆನ್ಸಿ ಸಹಿತ ನಗದು, ಹಲವು ಮೊಬೈಲ್ ಫೋನ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.


Spread the love

Exit mobile version