Home Mangalorean News Kannada News ಪಡುಬಿದ್ರಿ ಸಾಂತೂರಿನಲ್ಲಿ ಬೋನಿಗೆ ಬಿದ್ದ ಹೆಣ್ಣು ಚಿರತೆ

ಪಡುಬಿದ್ರಿ ಸಾಂತೂರಿನಲ್ಲಿ ಬೋನಿಗೆ ಬಿದ್ದ ಹೆಣ್ಣು ಚಿರತೆ

Spread the love

ಪಡುಬಿದ್ರಿ ಸಾಂತೂರಿನಲ್ಲಿ ಬೋನಿಗೆ ಬಿದ್ದ ಹೆಣ್ಣು ಚಿರತೆ

ಉಡುಪಿ: ಜನವಸತಿ ಪರಿಸರದಲ್ಲಿ ಓಡಾಡುತ್ತಿದ್ದ ಚಿರತೆಯೊಂದು ಅರಣ್ಯಾಧಿಕಾರಿಗಳು ಇರಿಸಿದ್ದ ಬೋನಿಗೆ ಬಿದ್ದ ಘಟನೆ ಕಾಪು ತಾಲೂಕಿನ ಪಡುಬಿದ್ರಿ ಸಮೀಪದ ಸಾಂತೂರಿನಲ್ಲಿ ನಡೆದಿದೆ.

ಸಾಂತೂರಿನ ರವಿ ಶೆಟ್ಟಿ ಅವರ ಮನೆಯ ತೋಟದಲ್ಲಿ ಹೆಣ್ಣು ಚಿರತೆಯನ್ನು ಸೆರೆ ಹಿಡಿಯಲಾಗಿದೆ.

ಕಳೆದ ಹಲವಾರು ದಿನಗಳಿಂದ ರವಿ ಶೆಟ್ಟಿಯವರ ಮನೆಯ ಪರಿಸರದಲ್ಲಿ ಚಿರತೆ ಓಡಾಟದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು. ಈ ಹಿನ್ನಲೆಯಲ್ಲಿ ಅರಣ್ಯಾಧಿಕಾರಿಗಳು ಚಿರತೆಯನ್ನು ಹಿಡಿಯಲು ಬೋನನ್ನು ಇಟ್ಟಿದ್ದು, ಗುರುವಾರ ತಡರಾತ್ರಿ ಬೋನಿಗೆ ಚಿರತೆ ಬಿದ್ದಿದ್ದು, ಸ್ಥಳೀಯರು ಕೂಡಲೇ ಅರಣ್ಯಾಧಿಕಾರಿಗಳಿಗೆ ಮಾಹಿತ ನೀಡಿದರು.

ಶುಕ್ರವಾರ ಬೆಳಿಗ್ಗೆ ಆರಣ್ಯಾಧಿಕಾರಿಗಳಾದ ವಲಯ ಅರಣ್ಯಾಧಿಕಾರಿ ಕ್ಲಿಪರ್ಟ್ ಲೋಬೋ, ಅರಣ್ಯ ಅಧಿಕಾರಿಗಳಾದ ಜೀವನದಾಸ್ ಶೆಟ್ಟಿ, ಗುರುರಾಜ್, ಅಭಿಲಾಶ್, ಜಯರಾಮ ಶೆಟ್ಟಿ, ಮಂಜುನಾಥ್ ನಾಯಕ್, ಪರಶುರಾಮ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸದ್ಯ ಚಿರತೆಯನ್ನು ಸುರಕ್ಷಿತ ಸ್ಥಳಕ್ಕೆ ಅರಣ್ಯ ಇಲಾಖೆ ಸ್ಥಳಾಂತರಿಸಿದೆ


Spread the love

Exit mobile version