ಪತ್ರಕರ್ತರ ಮೇಲೆ ಹಲ್ಲೆ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಖಂಡನೆ
ಮಂಗಳೂರು: ಕೆಜೆ. ಹಳ್ಳಿ ಹಾಗೂ ಡಿ. ಜೆ. ಹಳ್ಳಿಯ ಘಟನೆಯೊಂದಕ್ಕೆ ಸಂಬಂಧಿಸಿದಂತೆ ಸುದ್ದಿಗೆ ತೆರಳಿದ ಪತ್ರಕರ್ತರ ಮೇಲೆ ನಡೆದ ಹಲ್ಲೆಯನ್ನು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಖಂಡಿಸಿದೆ
ಬೆಂಗಳೂರು ಮಹಾನಗರದ ಕೆ. ಜೆ. ಹಳ್ಳಿ ಹಾಗೂ ಡಿ. ಜೆ. ಹಳ್ಳಿಯ ಘಟನೆಯೊಂದಕ್ಕೆ ಸಂಬಂಧಿಸಿದಂತೆ ಸುದ್ದಿಗೆ ತೆರಳಿದ ಪತ್ರಕರ್ತರ ಮೇಲೆ ಕೆಲವು ಗೂಂಡಾಗಳು ಹಲ್ಲೆ ಮಾಡಿದ್ದು ಅಲ್ಲದೇ .ಪೊಲೀಸರ ಮೇಲೆ ಕೂಡ ಹಲ್ಲೆ ಮಾಡಿ ಗೂಂಡಾ ವರ್ತನೆ ಮಾಡಿರುವ ಬಗ್ಗೆ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ತೀವ್ರವಾಗಿ ಖಂಡಿಸುತ್ತಾ ಸುದ್ದಿಗೆ ತೆರಳುವ ಪತ್ರಕರ್ತರಿಗೆ ರಕ್ಷಣೆ ನೀಡಬೇಕು ಹಾಗೂ ಸರ್ಕಾರ ಕೂಡಲೇ ಆರೋಪಿಗಳ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ರಾಜ್ಯಧ್ಯಕ್ಷ ನಾರಾಯಣ ಹಾಗೂ ಕಾರ್ಯದರ್ಶಿ ರಾಘವೇಂದ್ರ ಕೆಸವಳಲು ಮತ್ತು ಪದಾಧಿಕಾರಿಗಳು ಒತ್ತಾಯಿಸಿ. ಸುದ್ದಿಗೆ ತೆರಳಿರುವ ಪತ್ರಕರ್ತರಿಗೆ ರಕ್ಷಣೆ ನೀಡಿ ಈ ಗುಂಡಾಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಒತ್ತಾಯಿಸಿದೆ .