Home Mangalorean News Kannada News ಪರಶುರಾಮ ಥೀಮ್​ಪಾರ್ಕ್​ ಯೋಜನೆಗೆ ಜಾರಿಯಾಗಿದ್ದು 11 ಅಲ್ಲ 6 ಕೋಟಿ ರೂ.: ಸಿಎಂಗೆ ಸುನಿಲ್​ ತಿರುಗೇಟು

ಪರಶುರಾಮ ಥೀಮ್​ಪಾರ್ಕ್​ ಯೋಜನೆಗೆ ಜಾರಿಯಾಗಿದ್ದು 11 ಅಲ್ಲ 6 ಕೋಟಿ ರೂ.: ಸಿಎಂಗೆ ಸುನಿಲ್​ ತಿರುಗೇಟು

Spread the love

ಪರಶುರಾಮ ಥೀಮ್​ಪಾರ್ಕ್​ ಯೋಜನೆಗೆ ಜಾರಿಯಾಗಿದ್ದು 11 ಅಲ್ಲ 6 ಕೋಟಿ ರೂ.: ಸಿಎಂಗೆ ಸುನಿಲ್​ ತಿರುಗೇಟು

ಬೆಂಗಳೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದಾರೆ ಎಂದು ವಿಪಕ್ಷಗಳು ಆರೋಪ ಮಾಡುತ್ತಿವೆ. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಶುಕ್ರವಾರ ಸದನದಲ್ಲಿ ಉತ್ತರ ನೀಡುವ ಭರದಲ್ಲಿ, ಕಾರ್ಕಳದ ಪರಶುರಾಮ ಥೀಮ್ಪಾರ್ಕ್ ನಿರ್ಮಾಣಕ್ಕೆ ಜಾರಿಯಾಗಿದ್ದ 11 ಕೋಟಿ ರೂ.ನಲ್ಲಿ ಹರಗಣ ನಡೆದಿದೆ ಎಂದು ಆರೋಪ ಮಾಡಿದ್ದರು. ಆದರೆ ಕಾರ್ಕಳದ ಪರಶುರಾಮ ಥೀಮ್ಪಾರ್ಕ್ ಯೋಜನೆಗೆ ಇದುವರೆಗು ಬಿಡುಗಡೆಯಾಗಿದ್ದು 11 ಕೋಟಿ ಅಲ್ಲ ಬರೀ 6 ಕೋಟಿ ರೂ. ಎಂದು ಬಿಜೆಪಿ ಶಾಸಕ ವಿ. ಸುನಿಲ್ ಕುಮಾರ್ ಟಾಂಗ್ ಕೊಟ್ಟಿದ್ದಾರೆ.

ಈ ಕುರಿತು ಟ್ವೀಟ್ ಮಾಡಿದ ಸುನಿಲ್ ಕುಮಾರ್ “ಒಬ್ಬ ಮುಖ್ಯಮಂತ್ರಿಯಾಗಿ ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಿದ್ದರಾಮಯ್ಯನವರಿಗೆ ನಾಚಿಕೆಯಾಗಬೇಕು. ಕಾರ್ಕಳದ ಪರಶುರಾಮ ಥೀಮ್ಪಾರ್ಕ್ನಲ್ಲಿ 11ಕೋಟಿ ರೂ. ಹಗರಣವಾಗಿದೆ ಎಂದು ವಿಧಾನಸಭಾ ಕಲಾಪದಲ್ಲಿ ನೀವು ನನ್ನ ವಿರುದ್ಧ ಆರೋಪಿಸಿದ್ದೀರಿ. ಆದರೆ ಈ ಯೋಜನೆಗೆ ಇದುವರೆಗೆ ಬಿಡುಗಡೆಯಾಗಿದ್ದೇ 6 ಕೋಟಿ ರೂ. ಎಂದು ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಟ್ವೀಟ್ ಮಾಡಿದ್ದಾರೆ.

“ಪರಶುರಾಮ ಥೀಮ್ಪಾರ್ಕ್ನಲ್ಲಿ ಅವ್ಯವಹಾರ ನಡೆದಿದೆ ಎಂದು ಕಳೆದ ಒಂದು ವರ್ಷದಿಂದ ಕಾಂಗ್ರೆಸ್ ನಾಯಕರು ಸುಳ್ಳು ನರೇಟಿವ್ ಕಟ್ಟುತ್ತಲೇ ಇದ್ದಾರೆ. ಇವರಿಗೆ ಸತ್ಯ ಬಹಿರಂಗವಾಗುವುದು ಬೇಕಿಲ್ಲ, ಪ್ರವಾಸೋದ್ಯಮ ಅಭಿವೃದ್ಧಿಯಾಗುವುದು ಬೇಕಿಲ್ಲ. ನಿರಂತರ ಆರೋಪ ನಡೆಸಿ ರಾಜಕೀಯದ ಬೇಳೆ ಬೇಯಿಸಿಕೊಳ್ಳುವುದು ಮಾತ್ರ ಅವರ ಉದ್ದೇಶ” ಎಂದು ಹರಿಹಾಯ್ದರು.

“ಪ್ರತಿ ಬಾರಿಯೂ ಅಧಿವೇಶನ ಸಂದರ್ಭದಲ್ಲಿ ಥೀಮ್ಪಾರ್ಕ್ ಬಗ್ಗೆ ಅಪಪ್ರಚಾರ ನಡೆಸುವುದು ಈ ಸರ್ಕಾರಕ್ಕೆ ಹಾಗೂ ಕಾರ್ಕಳ ಕಾಂಗ್ರೆಸ್ ಮುಖಂಡರಿಗೆ ಚಟವಾಗಿಬಿಟ್ಟಿದೆ. ಕಳೆದ ಅಧೀವೇಶನದ ಸಮಯದಲ್ಲಿ ತನಿಖೆ ನಡೆಸುತ್ತೇವೆ ಎಂದರು. ಸಿಐಡಿ ತನಿಖೆಗೂ ಸೂಚಿಸಿದರು, ಆದರೆ ಇದುವರೆಗೆ ತನಿಖೆ ಪ್ರಗತಿಯಾಗಿಲ್ಲ. ಕಾಲಮಿತಿಯಲ್ಲಿ ಯೋಜನೆ ಪೂರ್ಣಗೊಳಿಸಿ ಎಂದು ಹೈಕೋರ್ಟ್ ಸೂಚನೆ ನೀಡಿತ್ತು. ಆದರೆ ಚುನಾವಣೆ ನೀತಿ ಸಂಹಿತೆಯ ನೆಪ ಹೇಳಿ ತಪ್ಪಿಸಿಕೊಂಡರು” ಎಂದಿದ್ದಾರೆ.

“ಈಗ ಮುಡಾದಲ್ಲಿ ಭೂಮಿ ನುಂಗಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಹೈಕಮಾಂಡ್ ಭಂಡಾರ ತುಂಬಿ ಸಿದ್ದರಾಮಯ್ಯ ಸಿಕ್ಕಿ ಹಾಕಿಕೊಂಡಿದ್ದಾರೆ. ಹೀಗಾಗಿ ಮತ್ತೆ ಪರಶುರಾಮ ಥೀಮ್ಪಾರ್ಕ್ ನೆನಪಾಗಿದೆ. ನಿಮ್ಮನ್ನೆಲ್ಲ ಬಲಿ ಹಾಕುತ್ತೇನೆ ಎಂದು ಸದನದಲ್ಲಿ ತೊಡೆ ತಟ್ಟಿದಷ್ಟೇ ದಮ್ಮು- ತಾಕತ್ತು ನಿಜಕ್ಕೂ ಇದ್ದರೆ ಮೊದಲು ನ್ಯಾಯಸಮ್ಮತ ತನಿಖೆ ನಡೆಸಿ. ಬೇಕಾದರೆ ಸಿಬಿಐ ತನಿಖೆಗೂ ಆದೇಶಿಸಿ, ಎಸ್ಎಸ್ಎಸ್ಐಟಿ ರಚನೆ ಮಾಡಿದರೂ ನೋ ಪ್ರಾಬ್ಲಮ್!. ಅದನ್ನು ಬಿಟ್ಟು ಅಪಪ್ರಚಾರದ ತುತ್ತೂರಿ ಊದುತ್ತಾ ಹೋದರೆ ನಮ್ಮ ತಿರುಗೇಟು ತಾಳುವುದಕ್ಕೂ ಸಿದ್ದರಾಗಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

Exit mobile version