ಪರಿಷತ್ ಉಪ ಚುನಾವಣೆ : ಸ್ವತಂತ್ರ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ
ಮಂಗಳೂರು: ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ನಾಲ್ಕನೆಯ ದಿನವಾದ ಮಂಗಳವಾರ ಸ್ವತಂತ್ರ ಅಭ್ಯರ್ಥಿಯಾಗಿ ದಿನಕರ ಉಳ್ಳಾಲ್ ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.