Home Mangalorean News Kannada News ಪರಿಷತ್ ಚುನಾವಣೆ: ಡಾ ಧನಂಜಯ ಸರ್ಜಿಯಿಂದ ಬಿರುಸಿನ ಮತಯಾಚನೆ

ಪರಿಷತ್ ಚುನಾವಣೆ: ಡಾ ಧನಂಜಯ ಸರ್ಜಿಯಿಂದ ಬಿರುಸಿನ ಮತಯಾಚನೆ

Spread the love

ಪರಿಷತ್ ಚುನಾವಣೆ: ಡಾ ಧನಂಜಯ ಸರ್ಜಿಯಿಂದ ಬಿರುಸಿನ ಮತಯಾಚನೆ

ಉಡುಪಿ/ಮಂಗಳೂರು: ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನಲೆಯಲ್ಲಿ ಎನ್ ಡಿ ಎ ಮೈತ್ರಿ ಕೂಟದ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳಾದ ಡಾ ಧನಂಜಯ ಸರ್ಜಿ ಮತ್ತು ಎಸ್ ಎಲ್ ಬೋಜೆಗೌಡ ಅವರ ಪರವಾಗಿ ವಿವಿಧೆಡೆ ಮತ ಪ್ರಚಾರ ನಡೆಸಲಾಯಿತು.

  • ಡಾ ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಗೆ ಭೇಟಿ

ಉಡುಪಿಯ ಪ್ರತಿಷ್ಠಿತ ಆಸ್ಪತ್ರೆಯಾದ ಡಾ ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಗೆ ಭೇಟಿ ನೀಡಿ ಹೆಸರಾಂತ ವೈದ್ಯರು ಮತ್ತು ಡಾ ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯಾ ವೈದಕೀಯ ನಿರ್ದೇಶಕರಾದ ಡಾ. ಪಿ. ವಿ ಭಂಡಾರಿ ಅವರನ್ನು ಭೇಟಿ ಮಾಡಿ ವಿಧಾನ ಪರಿಷತ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಬೆಂಬಲಿಸುವಂತೆ ಮತಯಾಚಿಸಲಾಯಿತು
ಈ ವೇಳೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ , ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ್ ಪೂಜಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

  • ಕೆನರಾ ಸ್ಕೂಲ್ ಮತ್ತು ಶಾರದಾ ಎಜುಕೇಷನಲ್ ಇನ್ಸ್ಟಿಟ್ಯೂಷನ್ಸ್ ಸಂಸ್ಥೆಗಳಿಗೆ ಭೇಟಿ

ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನಲೆಯಲ್ಲಿ ಶುಕ್ರವಾರ ಮಂಗಳೂರಿನ ಪ್ರತಿಷ್ಠಿತ ವಿದ್ಯಾ ಸಂಸ್ಥೆಗಳಾದ ಕೆನರಾ ಸ್ಕೂಲ್ ಮತ್ತು ಶಾರದಾ ಎಜುಕೇಷನಲ್ ಇನ್ಸ್ಟಿಟ್ಯೂಷನ್ಸ್ ಸಂಸ್ಥೆಗಳಿಗೆ ಭೇಟಿ ನೀಡಿ ಎನ್ ಡಿ ಎ ಮೈತ್ರಿ ಕೂಟದ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳಾದ ಡಾ ಧನಂಜಯ ಸರ್ಜಿ ಮತ್ತು ಎಸ್ ಎಲ್ ಬೋಜೆಗೌಡ ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಲು ಬೆಂಬಲಿಸಿ ಮತಹಾಕುವಂತೆ ಅಲ್ಲಿನ ಉಪನ್ಯಾಸವರ್ಗ ಮತ್ತು ಸಿಬ್ಬಂದಿ ವರ್ಗದವರಲ್ಲಿ ಮತಯಾಚಿಸಲಾಯಿತು

ಈ ವೇಳೆ ಮಾಜಿ ವಿಧಾನಪರಿಷತ್ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಧಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ,ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಮಂಗಳೂರು ಧಕ್ಷಿಣದ ಶಾಸಕರಾದ ವೇದವ್ಯಾಸ ಕಾಮತ್ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಕಾಲೇಜಿನ ಆಡಳಿತ ವರ್ಗ , ಉಪನ್ಯಾಸ ವರ್ಗ , ಶಿಕ್ಷಕ ವರ್ಗ ಮತ್ತು ಪದವೀಧರ ಮತದಾರರು ಉಪಸ್ಥಿತರಿದ್ದರು.

  • ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ

ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನಲೆಯಲ್ಲಿ ಎನ್ ಡಿ ಎ ಮೈತ್ರಿ ಕೂಟದ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳಾದ ಡಾ ಧನಂಜಯ ಸರ್ಜಿ ಮತ್ತು ಎಸ್ ಎಲ್ ಬೋಜೆಗೌಡ ಅವರು ಉಡುಪಿಯ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿ ಅಲ್ಲಿನ ಉಪನ್ಯಾಸವರ್ಗ ಮತ್ತು ಸಿಬ್ಬಂಧಿವರ್ಗದವರಲ್ಲಿ ಮತಯಾಚಿಸಲಾಯಿತು

ಈ ವೇಳೆ ಕಾಲೇಜಿನ ಪ್ರಾಂಶುಪಾಲರಾದ ಸುರೇಶ ರೈ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ , ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಸೇರಿದಂತೆ , ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕಿಶೋರ್ ಕುಮಾರ್ ಸೇರಿದಂತೆ ಕಾಲೇಜಿನ ಆಡಳಿತ ವರ್ಗ ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

  • ಡಾ ಜಿ ಶಂಕರ್ ಸರ್ಕಾರೀ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರಕ್ಕೆ ಭೇಟಿ

ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನಲೆಯಲ್ಲಿ ಎನ್ ಡಿ ಎ ಮೈತ್ರಿ ಕೂಟದ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳಾದ ಡಾ ಧನಂಜಯ ಸರ್ಜಿ ಮತ್ತು ಎಸ್ ಎಲ್ ಬೋಜೆಗೌಡ ಅವರು ಉಡುಪಿಯ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಡಾ ಜಿ ಶಂಕರ್ ಸರ್ಕಾರೀ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕ್ಕೆ ಭೇಟಿ ನೀಡಿ ಅಲ್ಲಿನ ಉಪನ್ಯಾಸಕರು ಮತ್ತು ಸಿಬ್ಬಂದಿವರ್ಗದವರಲ್ಲಿ ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲ್ಲಿಸುವಂತೆ ಮತಯಾಚನೆ ಮಾಡಲಾಯಿತು

ಈ ವೇಳೆ, ಕಾಲೇಜು ಪ್ರಾಂಶುಪಾಲರಾದ ಭಾಸ್ಕರ್ ಶೆಟ್ಟಿ , ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ಪಾಲ್ ಸುವರ್ಣ , ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ , ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ್ ಪೂಜಾರಿ, ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹರಿಕೃಷ್ಣ ಸೇರಿದಂತೆ , ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.


Spread the love

Exit mobile version