Home Mangalorean News Kannada News ಪರಿಷ್ಕೃತ ಆದೇಶ – ಭಾರಿ ಮಳೆ: ನಾಳೆ (ಜು.6) ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ...

ಪರಿಷ್ಕೃತ ಆದೇಶ – ಭಾರಿ ಮಳೆ: ನಾಳೆ (ಜು.6) ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ

Spread the love

ಭಾರಿ ಮಳೆ: ನಾಳೆ (ಜು.6) ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಉಡುಪಿ: ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆಯ ತೀವ್ರತೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜು.6ರ ಶನಿವಾರ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಮಾತ್ರವಲ್ಲದೇ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿದೆ.

ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪೋಮಾ, ಇಂಜಿನಿಯರಿಂಗ್, ಐಟಿಐಗಳಿಗೆ ರಜೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ತನ್ನ ಆದೇಶದಲ್ಲಿ ತಿಳಿಸಿದ್ದಾರೆ.

ಈ ಮೊದಲ ಆದೇಶದಲ್ಲಿ ಕೇವಲ ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿತ್ತು ಪರಿಷ್ಕೃತ ಆದೇಶದಲ್ಲಿ ಜಿಲ್ಲಾಧಿಕಾರಿಗಳು ಇಡೀ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ


Spread the love

Exit mobile version