ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿ: ಸ್ಪೀಕರ್ ಯು.ಟಿ.ಖಾದರ್ ಸಂತಾಪ

Spread the love

ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿ: ಸ್ಪೀಕರ್ ಯು.ಟಿ.ಖಾದರ್ ಸಂತಾಪ

ಮಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ನಡೆಸಿದ ಪ್ರವಾಸಿಗರ ನರಮೇಧ ಅತ್ಯಂತ ಹೇಯ ಕೃತ್ಯ, ಇದು ದೇಶದ ಪ್ರತಿಯೊಬ್ಬರಿಗೂ ಅತ್ಯಂತ ನೋವಿನ ಸಂಗತಿಯಾಗಿದ್ದು ಉಗ್ರರ ಕ್ರೌರ್ಯಕ್ಕೆ ಬಲಿಯಾದ ಪ್ರವಾಸಿಗರಿಗೆ ಸಂತಾಪ ಸೂಚಿಸುವುದಾಗಿ ಸ್ಪೀಕರ್ ಯುಟಿ ಖಾದರ್ ತಿಳಿಸಿದ್ದಾರೆ.

ಈ ಪೈಕಿ ಕರ್ನಾಟಕದ ಇಬ್ಬರು ಬಲಿಯಾಗಿರುವುದು ಅತ್ಯಂತ ದುಃಖದ ವಿಚಾರ. ಮೃತರ ಕುಟುಂಬಕ್ಕೆ ಸಾಂತ್ವನಗಳನ್ನು ಸಲ್ಲಿಸುತ್ತಾ, ದುಃಖವನ್ನು ಭರಿಸುವ ಶಕ್ತಿ ಆ ಭಗವಂತ ಕುಟುಂಬಕ್ಕೆ ನೀಡಲಿ, ಕಣಿವೆ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ನೆಲೆಸಲಿ, ಅಲ್ಲಿ ಸಿಲುಕಿರುವ ಪ್ರವಾಸಿಗರು ಸುರಕ್ಷಿತವಾಗಿ ತಾಯ್ನಾಡಿಗೆ ಮರಳಲಿ ಎಂದು ಪ್ರಾರ್ಥಿಸುವುದಾಗಿ ಯು ಟಿ ಖಾದರ್ ತಿಳಿಸಿದರು.

ಅಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಯಾರಾದರೂ ಕಾಶ್ಮೀರ ಪ್ರವಾಸಕ್ಕಾಗಿ ತೆರಳಿದ್ದರೆ ಅವರ ರಕ್ಷಣೆಗಾಗಿ ತುರ್ತು ಸಹಾಯವಾಣಿ ತೆರೆಯಲು ಜಿಲ್ಲಾಧಿಕಾರಿಗೆ ಯು.ಟಿ.ಖಾದರ್ ಸೂಚನೆ ನೀಡಿದ್ದಾರೆ.

ಸಾರ್ವಜನಿಕರು ಅಗತ್ಯ ಬಿದ್ದರೆ ತುರ್ತು ಸಹಾಯವಾಣಿ ಯನ್ನು ಸಂಪರ್ಕಿಸಬಹುದು. ಅಲ್ಲದೆ ಸಭಾಧ್ಯಕ್ಷರ ಮಂಗಳೂರು ಕಚೇರಿಯ ದೂರವಾಣಿ ನಂಬರ್ +91 7204440444, +91 7026991111 ಮೂಲಕ ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.


Spread the love
Subscribe
Notify of

0 Comments
Inline Feedbacks
View all comments