ಪಾವೂರು ಉಳಿಯ ದ್ವೀಪದಲ್ಲಿ ಅಕ್ರಮ ಮರಳುಗಾರಿಕೆಯನ್ನು ಶಾಶ್ವತವಾಗಿ ತಡೆಗಟ್ಟಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Spread the love

ಪಾವೂರು ಉಳಿಯ ದ್ವೀಪದಲ್ಲಿ ಅಕ್ರಮ ಮರಳುಗಾರಿಕೆಯನ್ನು ಶಾಶ್ವತವಾಗಿ ತಡೆಗಟ್ಟಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

ಮಂಗಳೂರು:  ಪಾವೂರು ಉಳಿಯ ದ್ವೀಪದಲ್ಲಿ ನಿರಂತರವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯನ್ನು ಶಾಶ್ವತವಾಗಿ ತಡೆಗಟ್ಟಬೇಕು, ಅಲ್ಲಿನ ದ್ವೀಪವಾಸಿಗಳ ಬದುಕನ್ನು ರಕ್ಷಿಸಬೇಕು ಹಾಗೂ ವಾಸ್ತವ ಚಿತ್ರಣವನ್ನು ಮರೆಮಾಚಿ ಅಕ್ರಮ‌ ಮರಳುಗಾರಿಕೆಯಲ್ಲಿ ತೊಡಗಿರುವ ವ್ಯಕ್ತಿಗಳ ಜೊತೆಗೆ ಕೈಜೋಡಿಸಿ ಜಿಲ್ಲಾಡಳಿತಕ್ಕೆ ಸುಳ್ಳು ಮಾಹಿತಿ ನೀಡಿದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿ ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇದಿಕೆ ಹಾಗೂ ಕೆಥೊಲಿಕ್ ಸಭಾ ಮಂಗಳೂರು ಪ್ರದೇಶ್(ರಿ) ಇವುಗಳ ಜಂಟಿ ಆಶ್ರಯದಲ್ಲಿ   ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರನ್ನು ಭೇಟಿಯಾಗಿ ಮನವಿಯನ್ನು ಅರ್ಪಿಸಲಾಯಿತು.

ನಿಯೋಗದಲ್ಲಿ ಸಮಾನ ಮನಸ್ಕ ಸಂಘಟನೆ ಗಳ ಜಂಟಿ ವೇದಿಕೆಯ ಪ್ರಮುಖರಾದ ಮುನೀರ್ ಕಾಟಿಪಳ್ಳ,ರೋಯ್ ಕ್ಯಾಸ್ಟಲಿನೋ, ಸುನಿಲ್ ಕುಮಾರ್ ಬಜಾಲ್,ಕೆಥೋಲಿಕ್ ಸಭಾದ ಅಧ್ಯಕ್ಷರಾದ ಆಲ್ವಿನ್ ಡಿಸೋಜ, ಇತರ ಪ್ರಮುಖರಾದ ಸ್ಟಾನಿ ಲೋಬೋ,ಜೋನ್ ಲಸ್ರದೋ ಹಾಗೂ ಪಾವೂರು ಉಳಿಯ ದ್ವೀಪವಾಸಿಗಳಾದ ಗಿಲ್ಬರ್ಟ್ ಡಿಸೋಜ,ರೊನಾಲ್ಡ್ ಡಿಸೋಜ,ಬೆನೆಡಿಕ್ಟ್ ಡಿಸೋಜ, ಬಜಿಲ್ ಡಿಸೋಜ, ಫಿಲಿಫ್ ಡಿಸೋಜ ಮುಂತಾದವರು ಉಪಸ್ಥಿತರಿದ್ದರು.


Spread the love