Home Mangalorean News Kannada News ‘ಪಿಎಂಶ್ರೀ‘ ಶಾಲೆಯಾಗಿ ಮುಡಿಪು ಜವಾಹರ್ ನವೋದಯ ವಿದ್ಯಾಲಯವನ್ನು ಅಧಿಕೃತವಾಗಿ ಘೋಷಿಸಿದ ಸಂಸದ ಕ್ಯಾ. ಚೌಟ

‘ಪಿಎಂಶ್ರೀ‘ ಶಾಲೆಯಾಗಿ ಮುಡಿಪು ಜವಾಹರ್ ನವೋದಯ ವಿದ್ಯಾಲಯವನ್ನು ಅಧಿಕೃತವಾಗಿ ಘೋಷಿಸಿದ ಸಂಸದ ಕ್ಯಾ. ಚೌಟ

Spread the love

‘ಪಿಎಂಶ್ರೀ‘ ಶಾಲೆಯಾಗಿ ಮುಡಿಪು ಜವಾಹರ್ ನವೋದಯ ವಿದ್ಯಾಲಯವನ್ನು ಅಧಿಕೃತವಾಗಿ ಘೋಷಿಸಿದ ಸಂಸದ ಕ್ಯಾ. ಚೌಟ

ಮಂಗಳೂರು: ಕೇಂದ್ರ ಸರ್ಕಾರ ಘೋಷಿಸಿರುವ ಮಹತ್ವಾಕಾಂಕ್ಷಿ ‘ಪಿಎಂ ಶ್ರೀ’ ಯೋಜನೆಯಡಿ ಮುಡಿಪುವಿನ ಜವಾಹರ್ ನವೋದಯ ವಿದ್ಯಾಲಯ ಆಯ್ಕೆಯಾಗಿರುವುದನ್ನು ಇಂದು ಅಧಿಕೃತವಾಗಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಘೋಷಿಸಿದ್ದಾರೆ.

ಈ ವೇಳೆ ಮಾತನಾಡಿದ ಸಂಸದರು, ಪ್ರಧಾನ ಮಂತ್ರಿ ಸ್ಕೂಲ್ ಫಾರ್ ರೈಸಿಂಗ್ ಇಂಡಿಯಾ( ಪಿಎಂಶ್ರೀ) ಯೋಜನೆಯಡಿ ಮುಡಿಪುವಿನ ಜವಾಹರ್ ನವೋದಯ ವಿದ್ಯಾಲಯ ಶಾಲೆ ಆಯ್ಕೆಯಾಗಿರುವುದು ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ. ಈ ಯೋಜನೆಯಡಿ ಶಾಲೆಯಲ್ಲಿ ತಂತ್ರಜ್ಞಾನ ಆಧಾರಿತ ನಾವೀನ್ಯ ಬೋಧನಾ ವ್ಯವಸ್ಥೆ, ಕೌಶಲ್ಯ, ಆವಿಷ್ಕಾರ, ಉತ್ತಮ ಮೂಲಸೌಕರ್ಯ ಸೇರಿದಂತೆ ಈ ವಿದ್ಯಾಸಂಸ್ಥೆಯ ಸರ್ವತೋಮುಖ ಬೆಳವಣಿಗೆ ಸಾಧ್ಯವಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ರಾಜೇಶ್, ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಮಾಜಿ ಅಧ್ಯಕ್ಷರಾದ ಸಂತೋಷ್ ಬೋಳಿಯಾರ್, ಬಿಜೆಪಿ ಮಂಗಳೂರು ಮಂಡಲ ಅಧ್ಯಕ್ಷರಾದ ಜಗದೀಶ್ ಆಳ್ವ, ಶಿಕ್ಷಕ ವೃಂದ, ವಿದ್ಯಾರ್ಥಿಗಳ ಪೋಷಕರು ಹಾಜರಿದ್ದರು.


Spread the love

Exit mobile version