Home Mangalorean News Kannada News ಪಿಎಂ ಕೇರ್ ನಿಧಿ ವಿರುದ್ಧ ಹೇಳಿಕೆ: ಸೋನಿಯಾ ಗಾಂಧಿ ವಿರುದ್ಧ ಶಿವಮೊಗ್ಗದಲ್ಲಿ ಎಫ್.ಐ.ಆರ್ ದಾಖಲು

ಪಿಎಂ ಕೇರ್ ನಿಧಿ ವಿರುದ್ಧ ಹೇಳಿಕೆ: ಸೋನಿಯಾ ಗಾಂಧಿ ವಿರುದ್ಧ ಶಿವಮೊಗ್ಗದಲ್ಲಿ ಎಫ್.ಐ.ಆರ್ ದಾಖಲು

Spread the love

ಪಿಎಂ ಕೇರ್ ನಿಧಿ ವಿರುದ್ಧ ಹೇಳಿಕೆ: ಸೋನಿಯಾ ಗಾಂಧಿ ವಿರುದ್ಧ ಶಿವಮೊಗ್ಗದಲ್ಲಿ ಎಫ್.ಐ.ಆರ್ ದಾಖಲು

ಶಿವಮೊಗ್ಗ: ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ  ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ವಿರುದ್ಧ ಗುರುವಾರ ಸಾಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎಎಫ್ಐಆರ್ ದಾಖಲಾಗಿದೆ.

ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮೋದಿಯವರು ಪಿಎಂ ಕೇರ್ ಫಂಡ್ ದುರ್ಬಳಕೆ ಮಾಡಿಕೊಂಡಿದ್ದಾರೆಂದು ಬರೆಯಲಾಗಿದೆ. ಅಲ್ಲದೆ, ಪಿಎಂ ಕೇರ್ ಫಂಡ್ ಫ್ರಾಡ್ ಎಂದು ಟ್ವಿಟರ್ ನಲ್ಲಿ ಟೀಕಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರನ್ನು ಅವಹೇಳನ ಮಾಡಲಾಗಿದೆ ಎಂದು ಆರೋಪಿಸಿ ಸಾಗರದ ವಕೀಲ ಪ್ರವೀಣ್ ಎಂಬುವವರು ಸೋನಿಯಾ ಗಾಂಧಿಯವರ ವಿರುದ್ಧ ದೂರು ನೀಡಿದ್ದಾರೆಂದು ತಿಳಿದುಬಂದಿದೆ.

ಇಂತಹ ಹೇಳಿಕೆಗಳ ಮೂಲಕ ಮೋದಿಯವರ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದ್ದು, ಜನರನ್ನು ಪ್ರಚೋದಿಸಲಾಗುತ್ತಿದೆ ಎಂದು ವಕೀಲ ಆರೋಪಿಸಿದ್ದಾರೆ. ದೂರು ಹಿನ್ನೆಲೆಯಲ್ಲಿ ಪೊಲೀಸರು ಐಪಿಸಿ ಸೆಕ್ಷನ್ 153 ಮತ್ತು 505(1) (ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love

Exit mobile version