ಪಿಣರಾಯಿ ಭೇಟಿಗೆ ವಿರೋಧ ; ಉಳ್ಳಾಲ ವಲಯ ಸಿಪಿಎಂ ಕಚೇರಿಗೆ ಬೆಂಕಿ
ಮಂಗಳೂರು: ಫೆಬ್ರವರಿ 25 ರಂದು ಮಂಗಳೂರಿನಲ್ಲಿ ಆಯೋಜಿಸಿರುವ ಕರಾವಳಿ ಸೌಹಾರ್ದ ರ್ಯಾಲಿಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪಾಲ್ಗೊಳ್ಳುವುದಕ್ಕೆ ತೀವೃ ವಿರೋಧ ವ್ಯಕ್ತಪಡಿಸಿತ್ತಿರುವ ಬೆನ್ನಲ್ಲೆ ಬುಧವಾರ ರಾತ್ರಿ ಉಳ್ಳಾಲ ವಲಯ ಸಿಪಿಎಂ ಕಚೇರಿಯ ಬಾಗಿಲು ಮರಿದು ಒಳ ನುಗ್ಗಿದ ದುಷ್ಕರ್ಮಿಗಳು ಅಲ್ಲಿರುವ ಸೊತ್ತುಗಳಿಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ.
ಉಳ್ಳಾಲ ಪೋಲಿಸ್ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಜಂಕ್ಷನ್ ಬಳಿಯ ಒಂದನೇ ಮಹಡಿಯಲ್ಲಿರುವ ಸಿಪಿಎಂ ಕಚೇರಿಯ ಬಾಗಿಲು ಮುರಿದು ಒಳನುಗ್ಗಿದ ದುಷ್ಕರ್ಮಿಗಳು ಅಲ್ಲಿದ್ದ ಟಿವಿ, ಕಪಾಟಿನಲ್ಲಿದ್ದ ಪಕ್ಷದ ಕಡತಗಳು, ಪೀಠೋಪಕರಣಗಳು, ಪೋಸ್ಟರ್, ಫ್ಲೆಕ್ಸ್ ಗಳಿಗೆ ಬೆಂಕಿ ಹಚ್ಚಿದ್ದಾರೆ. ಗುರುವಾರ ಬೆಳಿಗ್ಗೆ ಕಚೇರಿಗೆ ಪತ್ರಿಕೆ ಹಾಕಲು ಬಂದ ವ್ಯಕ್ತಿ ಕೃತ್ಯವನ್ನು ಗಮನಿಸಿ ಸಂಬಂಧಪಟ್ಟವರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಉಳ್ಳಾಲ ಪೋಲಿಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.