ಪಿಯುಸಿ ಫಲಿತಾಂಶ ಪ್ರಕಟ, ಉಡುಪಿ ಪ್ರಥಮ, ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಸ್ಥಾನ

Spread the love

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಉಡುಪಿ ಪ್ರಥಮ, ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಸ್ಥಾನ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಿದೆ. ಉಡುಪಿ ಜಿಲ್ಲೆ ಪ್ರಥಮ ಸ್ಥಾನ, ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಗಳಿಸಿದೆ.

ಯಾದಗಿರಿ ಜಿಲ್ಲೆಯು ಶೇ.48.45 ಫಲಿತಾಂಶ ಪಡೆದು ಕೊನೆಯ ಸ್ಥಾನದಲ್ಲಿದೆ. ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಕಾಮತ್ ಮೊದಲ ಸ್ಥಾನ ಪಡೆದಿದ್ದಾರೆ.

ದಕ್ಷಿಣ ಕನ್ನಡದ ಎಕ್ಸ್​ಪರ್ಟ್​ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ದೀಪಶ್ರೀ ಗೆ ಮೊದಲ ಸ್ಥಾನ ಪಡೆದಿದ್ದು, ದಕ್ಷಿಣ ಕನ್ನಡದ ಕೆನಾರ ಪಿಯು ಕಾಲೇಜು‌ ವಿದ್ಯಾರ್ಥಿನಿಯಾಗಿದ್ದಾರೆ. 600 ಕ್ಕೆ ‌ 599 ಅಂಕಗಳನ್ನು ಪಡೆದಿದ್ದಾರೆ.ಕಲಾ ವಿಭಾಗದಲ್ಲಿ ಸಂಜನಾ ಬಾಯಿ ಪ್ರಥಮ ಸ್ಥಾನ ಪಡೆದಿದ್ದಾರೆ.ಬಳ್ಳಾರಿ ಜಿಲ್ಲೆಯ ಇಂದು ಪಿಯು ಕಾಲೇಜು ವಿದ್ಯಾರ್ಥಿನಿಯಾಗಿದ್ದು, 600 ಕ್ಕೆ ‌597 ಅಂಕ ಪಡೆದಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆಯನ್ನು 6,37,805 ವಿದ್ಯಾರ್ಥಿಗಳು ಬರೆದಿದ್ದರು. 6,37,805 ವಿದ್ಯಾರ್ಥಿಗಳ ಪೈಕಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ ಶೇಕಡಾ 73.45ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ ಶೇಕಡಾ 53.29ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇಕಡಾ 76.07ರಷ್ಟು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಶೇಕಡಾ 82.54ರಷ್ಟು ಉತ್ತೀರ್ಣರಾಗಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments