ಪುತ್ತೂರಿನಲ್ಲಿ ಮಣ್ಣು ಕುಸಿದು ಇಬ್ಬರು ಕಾರ್ಮಿಕರ ಸಾವು; ಇನ್ನಿಬ್ಬರಿಗೆ ಗಾಯ

Spread the love

ಪುತ್ತೂರಿನಲ್ಲಿ ಮಣ್ಣು ಕುಸಿದು ಇಬ್ಬರು ಕಾರ್ಮಿಕರ ಸಾವು; ಇನ್ನಿಬ್ಬರಿಗೆ ಗಾಯ

ಪುತೂರು: ವಾಣಿಜ್ಯ ಸಂಕೀರ್ಣ ಕಟ್ಟಡವೊಂದರ ನಿರ್ಮಾಣ ಕಾಮಗಾರಿ ವೇಳೆ ಹಠಾತ್ ಮಣ್ಣಿನ ತಡೆಗೊಡೆ ಕುಸಿದ ಪರಿಣಾಮ ಮಣ್ಣಿನಡಿ ಸಿಲುಕಿ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಪುತೂರು ಸಮೀಪದ ನೆಲ್ಲಿಕಟ್ಟೆ ಎಂಬಲ್ಲಿ ಸಂಭವಿಸಿದೆ.

ಮೃತರನ್ನು ಮಂಗಳೂರಿನ ಜಲ್ಲಿಗುಡ್ಡೆ ನಿವಾಸಿ ಪದ್ಮನಾಭ (35) ಮತ್ತು ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಶಿವು ಯಾನೆ ಶಿವಣ್ಣ (40) ಎಂದು ಗುರುತಿಸಲಾಗಿದೆ. ಕೊಪ್ಪಳ ಚಾಲೂಕಿನ ಮಹಾಂತೇಶ ಮತ್ತು ಯಶವಂತ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪುತ್ತೂರು ನಗರದ ನೆಲ್ಲಿಕಟ್ಟೆ ಹತ್ತಿರವಿರುವ ಕಟ್ಟಡ ನಿರ್ಮಾಣ ಸ್ಥಳದಲ್ಲಿ ಆರು ಜನ ಕಟ್ಟಡ ಕಾರ್ಮಿಕರು ಭೂಮಿಯಿಂದ ಸುಮಾರು 30 ಅಡಿ ಆಳದಲ್ಲಿ ಕೆಲಸ ಮಾಡುತ್ತಿರುವಾಗ ಬಸ್ ಸ್ಟ್ಯಾಂಡ್ ಪಕ್ಕದ ರಸ್ತೆ ಪಕ್ಕದಲ್ಲಿರುವ ಮಣ್ಣಿನ ಗುಡ್ಡೆ ಕುಸಿದು ನಾಲ್ಕು ಜನ ಮಣ್ಣಿನ ಅಡಿಯಲ್ಲಿ ಸಿಕ್ಕಿಹಾಕಿಕೊಂಡಿದ್ದರ ಪರಿಣಾಮ ಪದ್ಮನಾಭ ಮತ್ತು ಶಿವಣ್ಣ ಸ್ಥಳದಲ್ಲೆ ಮೃತಪಟ್ಟರೆ, ಮಹಾಂತೇಶ ಮತ್ತು ಯಶವಂತ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಟ್ಟಡ ನಿರ್ಮಾಣ ಸ್ಥಳವನ್ನು ಗಮನಿಸಿದಾಗ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೆ, ನಿರ್ಲಕ್ಷತನದಿಂದ ಕಟ್ಟಡ ನಿರ್ಮಾಣ ಮಾಡುತ್ತಿದ್ದಾರೆಂದು ಕಂಡುಬರುತ್ತದೆ. ಘಟನೆಗೆ ಕಾರಣರಾದವರ ಮೇಲೆ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಪೋಲಿಸರು ತಿಳಿಸಿದ್ದಾರೆ.


Spread the love