ಪುತ್ತೂರು | ಬಾಲಕಿಯೊಂದಿಗೆ ಅನುಚಿತ ವರ್ತನೆ ಪ್ರಕರಣ: ಆರೋಪಿಗೆ 3 ವರ್ಷ ಜೈಲುಶಿಕ್ಷೆ

Spread the love

ಪುತ್ತೂರು | ಬಾಲಕಿಯೊಂದಿಗೆ ಅನುಚಿತ ವರ್ತನೆ ಪ್ರಕರಣ: ಆರೋಪಿಗೆ 3 ವರ್ಷ ಜೈಲುಶಿಕ್ಷೆ

ಪುತ್ತೂರು: ಸುಮಾರು ಒಂಭತ್ತು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಸಿನ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ಆರೋಪಿಗೆ ಪೊಕ್ಸೋ ಕಾಯ್ದೆಯಡಿ 3 ವರ್ಷಗಳ ಜೈಲು ಶಿಕ್ಷೆ ಮತ್ತು 20 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಪುತ್ತೂರು ತಾಲೂಕಿನ ಕಬಕ ಗ್ರಾಮದ ವಿದ್ಯಾಪುರ ನಿವಾಸಿ ಮಹಮ್ಮದ್ ಮುಸ್ತಫ ಯಾನೆ ಮುಸ್ತಫ ಶೇಖ್ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಈತ 2015ರ ಡಿಸೆಂಬರ್ 4ರಂದು ಕಬಕ ಗ್ರಾಮದ ಬೈಪದವು ಎಂಬಲ್ಲಿ ಅಂಗಡಿಗೆಂದು ಕಾಲುದಾರಿಯಲ್ಲಿ ಬರುತ್ತಿದ್ದ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದ. ಬಾಲಕಿ ಆತನಿಂದ ತಪ್ಪಿಸಿಕೊಂಡು ಮನೆಗೆ ತೆರಳಿ ಹೆತ್ತವರಲ್ಲಿ ವಿಷಯ ತಿಳಿಸಿದ್ದಳು. ಸಂತ್ರಸ್ತೆಯ ತಾಯಿ ನೀಡಿದ ದೂರಿನಂತೆ ಪುತ್ತೂರು ನಗರ ಠಾಣೆ ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 14 ಸಾಕ್ಷಿದಾರರನ್ನು ವಿಚಾರಿಸಿದ ನ್ಯಾಯಾಲಯವು ಆರೋಪಿ ತಪ್ಪಿತಸ್ಥನೆಂದು ತೀರ್ಮಾನಿಸಿ ಭಾರತೀಯ ದಂಡ ಸಂಹಿತೆ ಕಲಂ 341 ಅಡಿಯ ಅಪರಾಧಕ್ಕೆ 1 ತಿಂಗಳ ಸಾದಾ ಶಿಕ್ಷೆ ಮತ್ತು ರೂ. 500 ದಂಡ, ದಂಡ ತೆರಲು ತಪ್ಪಿದಲ್ಲಿ ಒಂದು ವಾರ ಸಾದಾ ಕಾರಾಗೃಹ ಶಿಕ್ಷೆ ಅನುಭವಿಸಬೇಕು, ಭಾರತೀಯ ದಂಡ ಸಂಹಿತೆ ಕಲಂ 354 ಅಡಿಯ ಅಪರಾಧ ಮತ್ತು ಪೊಕ್ಸೋ ಕಾಯ್ದೆಯಂತೆ 3 ವರ್ಷ ಸಾದಾ ಕಾರಾಗೃಹ ಶಿಕ್ಷೆ ಮತ್ತು ರೂ. 20,000 ದಂಡ ವಿಧಿಸಿದೆ. ದಂಡ ತೆರಲು ತಪ್ಪಿದಲ್ಲಿ ಮತ್ತೆ 6 ತಿಂಗಳ ಕಾರಾಗೃಹ ಶಿಕ್ಷೆ ಅನುಭವಿಸಬೇಕು ಎಂದು ಆದೇಶಿಸಿ ಪುತ್ತೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಧೀಶ ಸರಿತಾ ಡಿ. ತೀರ್ಪು ನೀಡಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments