ಪುತ್ತೂರು: ಹತ್ತನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

Spread the love

ಪುತ್ತೂರು: ಹತ್ತನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಪುತ್ತೂರು: ಪ್ರೌಢಶಾಲಾ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇರ್ದೆ ಗ್ರಾಮದ ದೂಮಡ್ಕಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಜೋಗಿಮೂಲೆ ನಿವಾಸಿ ರಮಣ್ ಕುಮಾರ್ (15) ಎಂದು ಗುರುತಿಸಲಾಗಿದೆ. ಈತ ಬೆಟ್ಟಂಪಾಡಿಯ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿಯಾಗಿದ್ದ.

ಈತನ ಮೃತದೇಹವು ಇಂದು ಬೆಳಗ್ಗೆ ಮನೆಯ ಕೋಣೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಸಂಪ್ಯ ಠಾಣಾ ಪೊಲೀಸರು ಧಾವಿಸಿದ್ದು, ತನಿಖೆ ಮುಂದುವರಿಸಿದ್ದಾರೆ.


Spread the love
1 Comment
Inline Feedbacks
View all comments
drona
6 years ago

So sad to hear about this. I wonder what drives the thinking in these young minds. May he rest in peace.