Home Mangalorean News Kannada News ಪೂಜಾ ಅತ್ಯಚಾರ-ಕೊಲೆ, ಝೈಬುನ್ನಿಸಾ ಸಾವು – ಎಸ್.ಐ.ಓ ಉಡುಪಿಯಿಂದ ಕಠಿಣ ಕ್ರಮಕ್ಕೆ ಆಗ್ರಹ

ಪೂಜಾ ಅತ್ಯಚಾರ-ಕೊಲೆ, ಝೈಬುನ್ನಿಸಾ ಸಾವು – ಎಸ್.ಐ.ಓ ಉಡುಪಿಯಿಂದ ಕಠಿಣ ಕ್ರಮಕ್ಕೆ ಆಗ್ರಹ

Spread the love

ಪೂಜಾ ಅತ್ಯಚಾರ-ಕೊಲೆ, ಝೈಬುನ್ನಿಸಾ ಸಾವು – ಎಸ್.ಐ.ಓ ಉಡುಪಿಯಿಂದ ಕಠಿಣ ಕ್ರಮಕ್ಕೆ ಆಗ್ರಹ

ಉಡುಪಿ: ನಾಡಿನಲ್ಲಿ ವಿದ್ಯಾರ್ಥಿನಿಯರ ಮೇಲೆ ನಿರಂತರ ದೌರ್ಜನ್ಯಗಳು ಹೆಚ್ಚಾಗುತ್ತಿದ್ದು, ಮೈಸೂರಿನಲ್ಲಿ ಶಿಕ್ಷಕ ರವಿಯವರ ಕಿರುಕುಳಕ್ಕೆ ಒಳಗಾಗಿ ಝೈಬುನ್ನಿಸಾ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಇದೀಗ ಮತ್ತೊಂದು ಅಮಾನವೀಯ ಘಟನೆಯಲ್ಲಿ ಬೀದರ್ ಕಾಲೇಜಿನ ವಿದ್ಯಾರ್ಥಿನಿ ಪೂಜಾಳನ್ನು ಶಂಶುದ್ದೀನ್ ಎಂಬ ವ್ಯಕ್ತಿ ಅತ್ಯಾಚಾರ ಮಾಡಿ ಕೊಲೆಗೈದಿದ್ದಾನೆ. ವಿದ್ಯಾರ್ಥಿನಿಯರ ಮೇಲಿನ ದೌರ್ಜನ್ಯದ ಸರಣಿ ನಿರಂತರವಾಗಿ ಮುಂದುವರಿದಿದೆ. ಈ ಬಗ್ಗೆ ವಿದ್ಯಾರ್ಥಿನಿಯರಿಗೆ ಸುರಕ್ಷತೆಯನ್ನು ಒದಗಿಸುವಲ್ಲಿ ಸರಕಾರಗಳು ಸೋತಿದೆ. ಆದ್ದರಿಂದ ಈ ಪ್ರಕರಣಗಳನ್ನು ಕರ್ನಾಟಕ ಸರ್ಕಾರ ಗಂಭೀರವಾಗಿ ಪರಿಗಣಿಸಿ ಕಠಿಣ ಕ್ರಮ ಕೈಗೊಳ್ಳಲು ಎಸ್.ಐ.ಓ ಉಡುಪಿ ಜಿಲ್ಲೆ ಆಗ್ರಹಿಸುತ್ತದೆ.

ಅದರೊಂದಿಗೆ ಉಡುಪಿ ಜಿಲ್ಲೆಯಲ್ಲೂ ವಿದ್ಯಾರ್ಥಿನಿಯರ ಸುರಕ್ಷತೆಯ ಬಗ್ಗೆ ಹೆಚ್ಚಿನ ಆದ್ಯತೆ ನೀಡಬೇಕು. ಎಲ್ಲ ಶಾಲಾ-ಕಾಲೇಜಿನ ತರಗತಿಗಳಿಗೆ, ಶಿಕ್ಷಕರ ಕೊಠಡಿಗೆ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು.ಅದರೊಂದಿಗೆ ನಿರ್ಜನ ಪ್ರದೇಶದಿಂದ ಬರುವ ವಿದ್ಯಾರ್ಥಿನಿಯರ ರಕ್ಷಣೆಗಾಗಿ ಸೂಕ್ತ ವ್ಯವಸ್ಥೆ ಮಾಡಬೇಕಂದು ಈ ಸಂದರ್ಭದಲ್ಲಿ ಎಸ್.ಐ.ಓ ಆಗ್ರಹಿಸುತ್ತದೆ. ಅದರೊಂದಿಗೆ ವಿದ್ಯಾರ್ಥಿನಿಯರ ಹಾಸ್ಟೆಲ್ ಸುರಕ್ಷತೆಯ ಬಗ್ಗೆಯೂ ಗಮನ ಹರಿಸಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.


Spread the love

Exit mobile version