ಪೊಲೀಸರಿಗೂ ಪ್ರಥಮ ಚಿಕಿತ್ಸೆ ತರಬೇತಿ ಅಗತ್ಯ: ಎಸ್ಪಿ ಸಂಜೀವ್ ಎಂ. ಪಾಟೀಲ್

Spread the love

ಪೊಲೀಸರಿಗೂ ಪ್ರಥಮ ಚಿಕಿತ್ಸೆ ತರಬೇತಿ ಅಗತ್ಯ: ಎಸ್ಪಿ ಸಂಜೀವ್ ಎಂ. ಪಾಟೀಲ್

ಉಡುಪಿ: ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತದಲ್ಲಿ ಸಂಭವಿಸುವ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿದೆ. ಇದನ್ನು ತಡೆಗಟ್ಟಲು ಪ್ರಥಮ ಚಿಕಿತ್ಸೆಯಂತಹ ತರಬೇತಿಗಳು ಸಹಾಯವಾಗುತ್ತದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಎಂ.ಪಾಟೀಲ್ ಹೇಳಿದರು.

ಅವರು ಇಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಉಡುಪಿ ಜಿಲ್ಲಾ ರೆಡ್ ಕ್ರಾಸ್ ಭವನದಲ್ಲಿ ನಡೆದ ಪ್ರಥಮ ಚಿಕಿತ್ಸಾ ತರಬೇತುದಾರರ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರಥಮ ಚಿಕಿತ್ಸೆ ದೊರೆಯದೆ ಅಪಘಾತದಿಂದ ಮರಣಕ್ಕೀಡಾಗುವವರ ಸಂಖ್ಯೆ ಹೆಚ್ಚುತ್ತಿದ್ದು, ಪ್ರತಿಯೊಬ್ಬರೂ ಪ್ರಥಮ ಚಿಕಿತ್ಸೆಯ ಬಗ್ಗೆ ಅರಿತಿರಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಘಟಕದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಡಾ.ಉಮೇಶ್ ಪ್ರಭು ವಹಿಸಿದ್ದರು.

ಈ ಸಂದರ್ಭದಲ್ಲಿ ಉಡುಪಿ ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ್ ಅವರಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕರ್ನಾಟಕ ರಾಜ್ಯ ಶಾಖೆಯ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ, ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪೂರ್ಣಿಮಾ ಹೆಗ್ಡೆ ಪ್ರಾರ್ಥಿಸಿದರು. ಉಡುಪಿ ಜಿಲ್ಲಾ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಜಿ.ಸಿ.ಜನಾರ್ಧನ್ ಸ್ವಾಗತಿಸಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲೆಯ ಉಪ ಸಭಾಪತಿ ಡಾ.ಅಶೋಕ್ ಕುಮಾರ್ ವೈ.ಜಿ. ವಂದಿಸಿದರು. ಜಯರಾಮ್ ಆಚಾರ್ಯ ಸಾಲಿಗ್ರಾಮ ಕಾರ್ಯಕ್ರಮ ನಿರೂಪಿಸಿದರು.


Spread the love