Home Mangalorean News Kannada News ಪೌರಕಾರ್ಮಿಕರಿಗೆ ಸಕಾಲಕ್ಕೆ ವೇತನ ಪಾವತಿಸಲು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಸೂಚನೆ 

ಪೌರಕಾರ್ಮಿಕರಿಗೆ ಸಕಾಲಕ್ಕೆ ವೇತನ ಪಾವತಿಸಲು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಸೂಚನೆ 

Spread the love

ಪೌರಕಾರ್ಮಿಕರಿಗೆ ಸಕಾಲಕ್ಕೆ ವೇತನ ಪಾವತಿಸಲು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಸೂಚನೆ 

ಮಂಗಳೂರು: ಪೌರಕಾರ್ಮಿಕರಿಗೆ ಅಗತ್ಯವಿರುವ ಸೌಕರ್ಯಗಳನ್ನು ಒದಗಿಸುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ ಅವರು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಫಾಯಿ ಕರ್ಮಚಾರಿ, ಮ್ಯಾನುವಲ್ ಸ್ಕಾಯ್ಸವೆಂಜರ್ಸ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಪೌರಕಾರ್ಮಿಕರಿಗೆ ತಿಂಗಳ 5ನೇ ತಾರೀಕಿನೊಳಗೆ ಸಂಬಳ ಪಾವತಿಸಬೇಕು. ಪೌರ ಕಾರ್ಮಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ, ಊಟ ತಿಂಡಿ ಮಾಡಲು ವಿಶ್ರಾಂತಿ ಕೊಠಡಿ, ಸೌಚಾಲಯ ಸೌಕರ್ಯವನ್ನು ಆದಷ್ಟು ಬೇಗ ಪೂರ್ಣಗೊಳಿಸಿ ಎಂದು ಸೂಚಿಸಿದರು. ಪೌರಕಾರ್ಮಿಕರಿಗೆ ಕ್ಯಾಶ್‍ಲೆಸ್ ಆರೋಗ್ಯ ಚಿಕಿತ್ಸೆ ವ್ಯವಸ್ಥೆ ಒದಗಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ಪೌರಕಾರ್ಮಿಕರ ನಿವೃತ್ತಿಯಾಗುವ ಸಮಯದಲ್ಲಿ ಅವರನ್ನು ಬಿಳ್ಕೊಡುವ ಸಮಾರಂಭದಲ್ಲಿಯೇ ನಿವೃತ್ತಿ ಹಣವನ್ನು ನೀಡಬೇಕು. ನಿವೃತ್ತಿ ವೇತನಕ್ಕಾಗಿ ಅವರು ಕಚೇರಿಗೆ ಅಲೆಯುವಂತಾಗಬಾರದು. ಅದಕ್ಕಾಗಿ ಮೂರು ತಿಂಗಳ ಮೊದಲು ಅಧಿಕಾರಿಗಳು ನಿವೃತ್ತ ದಾಖಲಾತಿಗಳು ಸಿದ್ಧಪಡಿಸಿ ಸಂಬಂಧಪಟ್ಟ ಇಲಾಖೆಗೆ ಸಲ್ಲಿಸಬೇಕು ಮಾಹಿತಿ ನಿಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ಡಾ. ಆನಂದ್, ಅಪರ ಜಿಲ್ಲಾಧಿಕಾರಿ ಸಂತೋμï, ಮಹಾನಗರಪಾಲಿಕೆ ಆಯುಕ್ತ ಆನಂದ್ ಉಪಸ್ಥಿತರಿದ್ದರು


Spread the love

Exit mobile version