Home Mangalorean News Kannada News ಪೌರತ್ವ ಕಾಯ್ಧೆ ; ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದರೆ ಅಡ್ಮಿನ್ ವಿರುದ್ದ ಕ್ರಮ –...

ಪೌರತ್ವ ಕಾಯ್ಧೆ ; ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದರೆ ಅಡ್ಮಿನ್ ವಿರುದ್ದ ಕ್ರಮ – ಡಾ|ಹರ್ಷ

Spread the love

ಪೌರತ್ವ ಕಾಯ್ಧೆ ; ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದರೆ ಅಡ್ಮಿನ್ ವಿರುದ್ದ ಕ್ರಮ – ಡಾ|ಹರ್ಷ

ಮಂಗಳೂರು: ಪೌರತ್ವ ಕಾಯ್ಧೆ ಬಳಿಕ ಸಾಮಾಜಿಕ ಜಾಲತಾಲದಲ್ಲಿ ಸುಳ್ಳು ¸ ಸುದ್ದಿಗಳನ್ನು ಹಬ್ಬಿಸುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಡಾ.ಪಿ ಎಸ್ ಹರ್ಷ ಎಚ್ಚರಿಕೆ ನೀಡಿದ್ದಾರೆ.

ಪೌರತ್ವ ತಿದ್ದುಪಡಿ ಮಸೂದೆಗೆ ವಿರುದ್ಧವಾಗಿ ನಡೆದ ಪ್ರತಿಭಟನೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಸಂದೇಶ ಕಳುಹಿಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳ ಲಾಗುವುದು . ಕೆಲವರು ಹೊರದೇಶದಿಂದ, ದೇಶದ ಇತರ ಭಾಗಗಳಿಂದ ಹಾಗೂ ನಗರದಲ್ಲಿ ಕೂಡ ಈ ಮಸೂದೆಯ ವಿರುದ್ಧ ಧ್ವನಿ ಎತ್ತಲು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚೋದನಕಾರಿ ಸಂದೇಶಗಳನ್ನು ರವಾನಿಸುತ್ತಿ ರುವುದು ಗಮನಕ್ಕೆ ಬಂದಿದೆ. ಇಂತಹ ಚಟುವಟಿಕೆಗಳನ್ನು ಪೊಲೀಸ್ ಇಲಾಖೆ ಸಹಿಸುವುದಿಲ್ಲ ಎಂದು ತಿಳಿಸಿದರು.

ಸಾಮಾಜಿಕ ಜಾಲತಾಣಗಳ ಮೂಲಕ ಕೋಮು ದ್ವೇಷವನ್ನು ಹರಡುವುದರ ವಿರುದ್ಧ ಪೊಲೀಸ್ ನೋಟಿಸ್ ಜಾರಿಗೊಳಿಸಲಾಗಿದೆ. ಹೀಗಾಗಿ ವಾಟ್ಸಾಪ್, ಟೆಲಿಗ್ರಾಂ , ಫೇಸ್ ಬುಕ್ ಮುಂತಾದ ಸಾಮಾಜಿಕ ಜಾಲತಾಣದಲ್ಲಿ ಕೋಮು ಸೂಕ್ಷ್ಮ ಸಂದೇಶಗಳನ್ನು ಹರಡಿದರೆ ಅಂತಹ ಗ್ರೂಪ್ ಅಡ್ಮಿನ್’ಗಳ ವಿರುದ್ದ ಎಫ್ ಐ ಆರ್ ದಾಖಲಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ಭಾವನೆಗೆ ದಕ್ಕೆ ತರುವಂತಹ ಸಂದೇಶಗಳು ಕೆಲವು ಮೊಬೈಲ್ ಸಂಖ್ಯೆಯಿಂದ ಹರಿದಾಡುತ್ತಿದ್ದು, ಕಂಡುಬಂದಿರುತ್ತದೆ. ಇಂತಹ ಸಂದೇಶಗಳ ಮೇಲೆ ಪೊಲೀಸ್ ಇಲಾಖೆಯು ತೀವ್ರ ನಿಗಾವಹಿಸಿರುತ್ತದೆ. ನೀವು ಇಂತಹ ಸಂದೇಶಗಳನ್ನು ರವಾನಿಸಿದಲ್ಲಿ ಕಲಂ 153(ಎ), 295 ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಗ್ರೂಪ್ ಅಡ್ಮಿನ್ ಗಳನ್ನು ನೇರವಾಗಿ ಹೊಣೆಗಾರಿಕೆ ಮಾಡಿ ಅವರ ಮೇಲೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ” ಎಂದು ತಿಳಿಸಿದ್ದಾರೆ.


Spread the love

Exit mobile version