ಪ್ರತಿಭಾವಂತ ಕ್ರೀಡಾಪಟುಗಳಿಗೆ ಪ್ರೋತ್ಸಾಹ- ಪ್ರಮೋದ್ ಮಧ್ವರಾಜ್

Spread the love

ಪ್ರತಿಭಾವಂತ ಕ್ರೀಡಾಪಟುಗಳಿಗೆ ಪ್ರೋತ್ಸಾಹ- ಪ್ರಮೋದ್ ಮಧ್ವರಾಜ್

ಉಡುಪಿ : ರಾಜ್ಯದಲ್ಲಿ ವಿವಿಧ ಕ್ರೀಡಾಕೂಟಗಳಲ್ಲಿ ಅತ್ಯುತ್ತಮ ಸಾಧನೆ ತೋರುವ ಆಯ್ದ 1000 ಪ್ರತಿಭಾವಂತ ಕ್ರೀಡಾಪಟುಗಳಿಗೆ ಕಾರ್ಪೋರೇಟ್ ಸಂಸ್ಥೆಗಳ ನೆರವಿನಿಂದ ಎಲ್ಲಾ ರೀತಿಯ ಪ್ರೋತ್ಸಾಹ ನೀಡಲಾಗುವುದು ಎಂದು ರಾಜ್ಯದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮೀನುಗಾರಿಕಾ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.

ಅವರು ಗುರುವಾರ ಉಡುಪಿಯ ಅಜ್ಜರಕಾಡು ಕ್ರೀಡಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಭಾರತ ಸರ್ಕಾರದ ಕ್ರೀಡಾ ಮಂತ್ರಾಲಯ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಖೇಲೋ ಇಂಡಿಯಾ ಕ್ರೀಡಾಕೂಟ 2016-17 ಉದ್ಘಾಟಿಸಿ ಮಾತನಾಡಿದರು.

ರಾಜ್ಯದಲ್ಲಿ ಈಗಾಗಲೇ ವಿವಿಧ ಕ್ರೀಡಾಕೂಟಗಳಲ್ಲಿ ಅತ್ಯುತ್ತಮ ಸಾಧನೆ ತೋರಿದ 662 ಕ್ರೀಡಾಪಟುಗಳನ್ನು ವಿಶೇಷ ಪ್ರೋತ್ಶಾಹ ಯೋಜನೆಗೆ ಆಯ್ಕೆ ಮಾಡಲಾಗಿದೆ ಒಟ್ಟು 1000 ಕ್ರೀಡಾಪಟುಗಳನ್ನು ಆಯ್ಕೆ ಮಾಡುವ ಗುರಿ ಇದ್ದು , ಕ್ರೀಡಾಕೂಟಗಳಲ್ಲಿ ಕ್ರೀಡಾಪಟುಗಳು ಉತ್ತಮ ಸಾಧನೆ ತೋರುವಂತೆ ತಿಳಿಸಿದ ಸಚಿವರು, ವಿಶೇಷ ಪ್ರೋತ್ಶಾಹ ಯೋಜನೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ವಿದೇಶಗಳಲ್ಲಿ ತರಬೇತಿ, ವಿದೇಶಿ ಕೋಚ್ ಗಳಿಂದ ತರಬೇತಿ, ವಿದ್ಯಾಭ್ಯಾಸದ ವೆಚ್ಚ ,ಪ್ರಯಾಣ ವೆಚ್ಚ ಸೇರಿದಂತೆ ಎಲ್ಲಾ ರೀತಿಯ ವೆಚ್ಚಗಳನ್ನು ಕಾರ್ಪೋರೇಟ್ ಸಂಸ್ಥೆಗಳ ನೆರವಿನಿಂದ ಒದಗಿಸಲು ಯೋಜನೆ ರೂಪಿಸಲಾಗಿದೆ ರಂದು ತಿಳಿಸಿದರು.

ರಾಜ್ಯದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ, ಒಲಂಪಿಕ್ಸ್ ನಲ್ಲಿ ಚಿನ್ನ ಗೆಲ್ಲುವ ಕ್ರೀಡಾಪಟುಗೆ 5 ಕೋಟಿ, ಬೆಳ್ಳಿ ಗೆದ್ದರೆ 3 ಕೋಟಿ ಹಾಗೂ ಕಂಚು ಗೆದ್ದರೆ 2 ಕೋಟಿ ರೂ ಗಳ ಬಹುಮಾನವನ್ನು ರಾಜ್ಯ ಸರ್ಕಾರ ಘೋಷಿಸಿದೆ, ಆದ್ದರಿಂದ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳ ಒಲಂಪಿಕ್ಸ್ ನಡೆಗೆ ಗುರಿ ಒಟ್ಟು ಸಾಧನೆ ತೋರುವಂತೆ ಸಚಿವರು ಹೇಳಿದರು. ತಾಲೂಕು ಕ್ರೀಡಾಧಿಕಾರಿ ಕುಸುಮಾಧರ್ ಉಪಸ್ಥಿತರಿದ್ದರು.

ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ತಾಲೂಕು ಕ್ರೀಡಾಧಿಕಾರಿ ನಾರಾಯಣ ರಾವ್ ವಂದಿಸಿದರು. ಪ್ರಶಾಂತ್ ಶೆಟ್ಟಿ ಹಾವಂಜೆ ನಿರೂಪಿಸಿದರು.


Spread the love