Home Mangalorean News Kannada News ಪ್ರತಿಯೊಬ್ಬರಲ್ಲಿ ಪರಿಸರ ಪ್ರಜ್ಞೆ ಅಗತ್ಯ

ಪ್ರತಿಯೊಬ್ಬರಲ್ಲಿ ಪರಿಸರ ಪ್ರಜ್ಞೆ ಅಗತ್ಯ

Spread the love

ಪ್ರತಿಯೊಬ್ಬರಲ್ಲಿ ಪರಿಸರ ಪ್ರಜ್ಞೆ ಅಗತ್ಯ

ಮಂಗಳೂರು : ಜುಲೈ 29 ರಂದು ಬೆಳಿಗ್ಗೆ 8 ಗಂಟೆಗೆ ವಿಟ್ಲ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ವಿಟ್ಲ ಗೃಹರಕ್ಷಕ ದಳ ಘಟಕ ಹಾಗೂ ವಿಟ್ಲ ರೋಟರಿ ಕ್ಲಬ್ ವತಿಯಿಂದ ವನಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟ ಡಾ|| ಮುರಲೀ ಮೋಹನ್ ಚೂಂತಾರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಸುಮಾರು ಒಂದು ಸಾವಿರ ಗೃಹರಕ್ಷಕರಿದ್ದು, ಪ್ರತಿಯೊಬ್ಬರಿಂದ ವರ್ಷಕ್ಕೆ ಒಂದು ಸಸಿ ನೆಡುವ ಪ್ರಯತ್ನ ಮಾಡಲಾಗಿದೆ ಎಂದು ನುಡಿದರು. ಸಸಿ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ವೈದ್ಯಾಧಿಕಾರಿ ಡಾ: ಪ್ರಶಾಂತ್.ಬಿ.ಎನ್. ಮಾತನಾಡಿ ಗಿಡ ನೆಡುವ ಕಾರ್ಯದ ಜತೆಗೆ ಪೋಷಣೆಯ ಜವಾಬ್ದಾರಿ ಎಲ್ಲರ ಮೇಲಿದೆ ನೆಟ್ಟ ಗಿಡ ಮರವಾಗಿ ನಿಂತಾಗ ವನಮಹೋತ್ಸವ ಕಾರ್ಯ ಅರ್ಥಪೂರ್ಣವಾಗುತ್ತದೆ ಎಂದು ನುಡಿದರು.

ವಿಟ್ಲ ರೋಟರಿ ಕ್ಲಬ್ ಅಧ್ಯಕ್ಷ ಚರಣ್ ಕಜೆ ಮಾತನಾಡಿ ಹವಾಮಾನ ವೈಪರೀತ್ಯ ಹೋಗಲಾಡಿಸಲು ಗಿಡ ನೆಡುವ ಅಗತ್ಯವಿದೆ. ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನೀಡುವ ಹೊಣೆ ನಮ್ಮ ಮೇಲಿದೆ. ರೋಟರಿ ಕ್ಲಬ್ ಪರಿಸರವನ್ನು ಹಸಿರಾಗಿಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದರು. ಕಾರ್ಯಕ್ರಮದಲ್ಲಿ ವಿಟ್ಲ ರೋಟರಿ ಕ್ಲಬ್ ಕಾರ್ಯದರ್ಶಿ ಸುಚೇತನ್ ಜೈನ್, ನಿಕಟಪೂರ್ವ ಕಾರ್ಯದರ್ಶಿ ಪ್ರಕಾಶ್ ನಾಯಕ್, ವಕೀಲ ಮೋಹನ್.ಎ., ಭಾಸ್ಕರ ಶೆಟ್ಟಿ, ದಿನೇಶ್, ಅಣ್ಣಪ್ಪ ಶಾಸ್ತಾನ, ವಿಟ್ಲ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ ಮತ್ತು ವಿಟ್ಲ ಘಟಕದ ಪ್ರಭಾರ ಘಟಕಾಧಿಕಾರಿ ಸಂಜೀವ ಮತ್ತು ವಿಟ್ಲ ಘಟಕದ ಗೃಹರಕ್ಷಕ ಗೃಹರಕ್ಷಕಿಯರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


Spread the love

Exit mobile version