Home Mangalorean News Kannada News ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮೂವರು ಪೊಲೀಸ್‌ ವಶಕ್ಕೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮೂವರು ಪೊಲೀಸ್‌ ವಶಕ್ಕೆ

Spread the love
RedditLinkedinYoutubeEmailFacebook MessengerTelegramWhatsapp

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮೂವರು ಪೊಲೀಸ್‌ ವಶಕ್ಕೆ
 

ಹಾಸನ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎನ್‌ಐಎ ತಂಡ ಮೂವರನ್ನು ಸಕಲೇಶಪುರ ತಾಲೂಕಿನ ಆನೆಮಹಲ್‌ನಲ್ಲಿ ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ.

ಬಂಧಿತರನ್ನು ಸುಳ್ಯ ಮೂಲದ ಮುಸ್ತಫಾ ಪೈಚಾರ್, ಸೋಮವಾರಪೇಟೆ ಮೂಲದ ಇಲ್ಯಾಸ್ ಹಾಗೂ ಸಿರಾಜ್‌ ಎಂದು ಗುರುತಿಸಲಾಗಿದೆ.

ಪ್ರವೀಣ್ ನೆಟ್ಟಾರು ಪ್ರಕರಣದ ನಾಲ್ಕನೇ ಆರೋಪಿ ಎಂದು ಗುರುತಿಸಲಾಗಿದ್ದ ಮುಸ್ತಫಾ ಪೈಚಾರ್ ಹಾಗೂ ಇಲ್ಯಾಸ್ ಆನೆಮಹಲ್‌ನ ಸಿರಾಜ್ ಬಳಿ ಕೆಲಸಕ್ಕೆ ಸೇರಿದ್ದರು ಎನ್ನಲಾಗಿದ್ದು, ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ ಸಿರಾಜ್ ಅವರನ್ನೂ ಎನ್‌ಐಎ ತಂಡ ವಶಕ್ಕೆ ಪಡೆದಿದೆ ಎಂದು ತಿಳಿದು ಬಂದಿದೆ.


Spread the love
RedditLinkedinYoutubeEmailFacebook MessengerTelegramWhatsapp

Exit mobile version