ಉಡುಪಿ: ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಿಗೆ ರಾಜ್ಯವಲಯ ಮತ್ತು ಜಿಲ್ಲಾ ವಲಯ ಕಾರ್ಯಕ್ರಮದ ಪ.ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಬಿಡುಗಡೆಯಾಗಿರುವ ಅನುದಾನವನ್ನು ನಿಗಧಿತ ಅವಧಿಯೊಳಗೆ , ಸಮರ್ಪಕವಾಗಿ , ಸಂಪೂರ್ಣವಾಗಿ ಬಳಸುವಂತೆ ಜಿಲ್ಲಾಧಿಕಾರಿ ಡಾ.ವಿಶಾಲ್ ಆರ್ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಅವರು ಮಂಗಳವಾರ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಎಲ್ಲಾ ಇಲಾಖೆಗಳು , ತಮ್ಮ ಇಲಾಖೆಗಳಿಂದ ನೀಡಿರುವ ಅನುದಾನದಲ್ಲಿ ಶೀಘ್ರವಾಗಿ ಕ್ರಿಯಾ ಯೋಜನೆಯನ್ನು ರೂಪಿಸಿ, ಅನುಮೋದನೆ ಪಡೆದು, ಫಲಾನುಭವಿಗಳ ಆಯ್ಕೆ ಹಾಗೂ ಕಾಮಗಾರಿಗಳನ್ನು ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸುವಂಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪ್ರೇಮನಾಥ್ ಮತ್ತು ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಪ.ಜಾತಿ/ಗಿರಿಜನ ಉಪಯೋಜನೆ ಅನುದಾನ ಅವಧಿಯೊಳಗೆ ಬಳಸಿ- ಜಿಲ್ಲಾಧಿಕಾರಿ
Spread the love
Spread the love