ಫೆ.17: ದಕ ಜಿಲ್ಲೆಯಲ್ಲಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರವಾಸ
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಫೆಬ್ರವರಿ 17 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ.
ಫೆಬ್ರವರಿ 17 ರಂದು ಬೆಳಿಗ್ಗೆ 7:10 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣ ಆಗಮನ. 8 ಗಂಟೆಗೆ ಸಕ್ರ್ಯೂಟ್ ಹೌಸ್ ಆಗಮನ. 10:30 ಗಂಟೆಗೆ ನಗರದ ಯೆಯ್ಯಾಡಿ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಜಿಲ್ಲಾ ಕೇಂದ್ರ ಗ್ರಂಥಾಲಯ ನೂತನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮ. 11:30 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ 2024 – 25 ನೇ ಸಾಲಿನ ದ್ವಿತೀಯ ತ್ರೈಮಾಸಿಕ ಕೆಡಿಪಿ ಮುಂದುವರಿದ ಪ್ರಗತಿ ಪರಿಶೀಲನಾ ಸಭೆ.
ಸಂಜೆ 4:30 ಗಂಟೆಗೆ ಜೋಕಟ್ಟೆ ಆಯುರ್ವೇದ ಆಸ್ಪತ್ರೆ ಆವರಣದಲ್ಲಿ ಆಸ್ಪತ್ರೆಯನ್ನು ರಾಷ್ಟ್ರೀಯ ಆಯುμï ಅಭಿಯಾನದಡಿ ಮೇಲ್ದರ್ಜೆಗೇರಿಸುವ ಕಾಮಗಾರಿಗೆ ಶಂಕುಸ್ಥಾಪನೆ. ನಂತರ 6:40 ಗಂಟೆಗೆ ಸಚಿವರು ವಿಮಾನದಲ್ಲಿ ಬೆಂಗಳೂರಿಗೆ ತೆರಳಲಿದ್ದಾರೆ.