ಫೆ.18: ಸಚಿವ ಸತೀಶ್ ಜಾರಕಿಹೊಳಿ ದ.ಕ.ಜಿಲ್ಲಾ ಪ್ರವಾಸ
ಮಂಗಳೂರು : ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಫೆ.18ರಂದು ದ.ಕ ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಪೂ. 11ಕ್ಕೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನೆಹರೂ ವಿಚಾರ ವೇದಿಕೆಯ ವತಿಯಿಂದ ನಡೆಯುವ ಗಾಂಧಿ-ಅಂಬೇಡ್ಕರ್- ನೆಹರೂ ಸ್ವಾತಂತ್ರ್ಯ ಸಂವಿಧಾನ ದೂರ ದೃಷ್ಟಿ ಎಂಬ ವಿಚಾರಗೋಷ್ಠಿಯಲ್ಲಿ ಭಾಗವಹಿಸುವರು.
ಮಧ್ಯಾಹ್ನ 1ಕ್ಕೆ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಾರ್ವಜನಿಕರ ಭೇಟಿ, 3ಕ್ಕೆ ದ.ಕ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು ಎಂದು ಪ್ರಕಟನೆ ತಿಳಿಸಿದೆ.