ಫ್ಲಾಟ್ ನಲ್ಲಿ ನಡೆಸುತ್ತಿದ್ದ ಅಕ್ರಮ ಜೂಜಾಟ ಅಡ್ಡೆಗೆ ದಾಳಿ: 11 ಮಂದಿ ಸೆರೆ
ಮಂಗಳೂರು ನಗರದ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಂಪ್ ವೆಲ್ ಬಳಿಯ ಫ್ಲಾಟ್ ವೊಂದರಲ್ಲಿ ಹಣವನ್ನು ಪಣವಾಗಿಟ್ಟುಕೊಂಡು ಅಕ್ರಮವಾಗಿ ಅಂದರ್ – ಬಾಹರ್ ಎಂಬ ಜೂಜಾಟವಾಡುತ್ತಿದ್ದ 11 ಜನರನ್ನು ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.
ದಿನಾಂಕ: 07-04-2018 ರಂದು ಮಂಗಳೂರು ನಗರದ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಂಪ್ ವೆಲ್ ಶಕ್ತಿ ಆಪಾರ್ಟ್ ಮೆಂಟ್ ನ ಫ್ಲಾಟ್ ವೊಂದರಲ್ಲಿ ಅಕ್ರಮವಾಗಿ ಜೂಜಾಟವಾಡುತ್ತಿದ್ದರೆಂಬ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಜೂಜಾಟವಾಡುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿ ಜೂಜಾಟದಲ್ಲಿ ನಿರತರಾಗಿದ್ದ 1. ಅರುಣ್ ಭಂಡಾರಿ, 2) ವಿಶ್ವನಾಥ, 3) ಹನೀಫ್, 4) ಮೋಹನ್ ದಾಸ್, 5) ಜರ್ನಾಧನ ಬಾಬು, 6) ಕೃಷ್ಣ ಮೂರ್ತಿ ಐತಾಳ್, 7) ಮಾರ್ಕ್ ಪಿಂಟೋ, 8) ಗೌರಿಶ್, 9) ಪ್ರಶಾಂತ್, 10) ಸಂಶುದ್ದೀನ್, 11) ಅಬೂಬಕ್ಕರ್ ಎಂಬವರನ್ನು ವಶಕ್ಕೆ ಪಡೆದುಕೊಂಡು, ಅವರ ವಶದಿಂದ ನಗದು ಹಣ ರೂ. 66,070/- , ಮೊಬೈಲ್ ಫೋನ್ ಗಳು ಹಾಗೂ ಜೂಜಾಟಕ್ಕೆ ಉಪಯೋಗಿಸಿದ ಇಸ್ಪೀಟ್ ಕಾರ್ಡ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೂಜಾಟವಾಡುತ್ತಿದ್ದವರನ್ನು ಹಾಗೂ ವಶಪಡಿಸಿಕೊಂಡ ಸೊತ್ತನ್ನು ಮುಂದಿನ ಕ್ರಮಕ್ಕಾಗಿ ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ಈ ಅಕ್ರಮ ಜೂಜಾಟ ಪ್ರಕರಣದ ಪತ್ತೆ ಕಾರ್ಯದಲ್ಲಿ ಮಂಗಳೂರು ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಶಾಂತಾರಾಮ್, ಪಿಎಸ್ಐ ಶ್ಯಾಮ್ ಸುಂದರ್, ಕಬ್ಬಾಳ್ ರಾಜ್ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.