ಫ್ಲಾಟ್ ನಲ್ಲಿ ವೇಶ್ಯಾವಾಟಿಕೆ: ಮಹಿಳಾ ಪಿಂಪ್ ಸೇರಿದಂತೆ 3 ಮಂದಿ ಸೆರೆ
ಮಂಗಳೂರು: ನಗರದ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಪದವು ಎಂಬಲ್ಲಿನ ಫ್ಲಾಟ್ ವೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳಾ ಪಿಂಪ್ ಹಾಗೂ 2 ಮಂದಿ ಗಿರಾಕಿಗಳನ್ನು ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.
ಮಂಗಳೂರು ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಪದವು ಎಂಬಲ್ಲಿನ ರಾಮಕೃಷ್ಣ ಆಪಾರ್ಟ್ ಮೆಂಟ್ ನ ಫ್ಲಾಟ್ ವೊಂದರಲ್ಲಿ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಖಚಿತ ಮಾಹಿತಿಯಂತೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆಯಲ್ಲಿ ನಿರತರಾಗಿದ್ದ ಬಳ್ಳಾರಿ ಜಿಲ್ಲೆಉ ಹೊಸಪೇಟೆ ತಾಲುಕಿನ ತಲವಾರ್ ಕೆರಿಯ ಮಂಜುನಾಥ್(38), ಉಡುಪಿ ಜಿಲ್ಲೆಯ ಮಲ್ಪೆ ಹರೀಶ್, (53), ಮತ್ತು ಪಿಂಪ್ ಕೆಲಸ ಮಾಡುತ್ತಿದ್ದ ಪದುವಾ ಶಾಲೆ ಬಳಿಯ ಸುಜಾತ ಎಂಬ ಮಹಿಳೆಯನ್ನು ಬಂಧಿಸಿದ್ದಾರೆ.
ಆರೋಪಿಗಳ ಪೈಕಿ ಸುಜಾತ ಎಂಬಾಕೆಯು ಈ ಫ್ಲಾಟ್ ನಲ್ಲಿ ವಾಸ್ತವ್ಯವಿದ್ದು ಯುವತಿಯರನ್ನು ಈ ಫ್ಲಾಟ್ ನಲ್ಲಿ ಇಟ್ಟುಕೊಂಡು ವೇಶ್ಯಾವಾಟಿಕೆ ದಂಧೆಗೆ ಬಳಸಿಕೊಂಡು ಹಣವನ್ನು ಗಳಿಸುತ್ತಿದ್ದನು.. ವೇಶ್ಯಾವಾಟಿಕೆ ವೃತ್ತಿ ನಡೆಸುತ್ತಿದ್ದ ನೊಂದ ಯುವತಿಯನ್ನು ರಕ್ಷಣೆ ಮಾಡಲಾಗಿದೆ. ಈ ಕೃತ್ಯದಲ್ಲಿ ಭಾಗಿಯಾದ 3 ಮಂದಿ ಆರೋಪಿಗಳನ್ನು ಹಾಗೂ ವಶಪಡಿಸಿಕೊಂಡ ಸೊತ್ತನ್ನು ಮುಂದಿನ ಕ್ರಮಕ್ಕಾಗಿ ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ಪೊಲೀಸ್ ಕಮೀಷನರ್ ಟಿ. ಆರ್ ಸುರೇಶ್ ರವರ ಆದೇಶದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿ.ಸಿ.ಪಿ ಹನುಮಂತರಾಯ ಹಾಗೂ ಅಪರಾಧ ಹಾಗೂ ಸಂಚಾರ ವಿಭಾಗದ ಡಿ.ಸಿ.ಪಿ ಯವರಾದ ಉಮಾ ಪ್ರಶಾಂತ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿಗಳು ಈ ದಾಳಿಯಲ್ಲಿ ಭಾಗವಹಿಸಿದ್ದರು.