Home Mangalorean News Kannada News ಬಂಟ್ವಾಳ: ಮುರಿದು ಬಿದ್ದಿದ್ದ ವಿದ್ಯುತ್ ತಂತಿ ತುಳಿದು ತಂದೆ, ಮಗಳು  ಮೃತ್ಯು

ಬಂಟ್ವಾಳ: ಮುರಿದು ಬಿದ್ದಿದ್ದ ವಿದ್ಯುತ್ ತಂತಿ ತುಳಿದು ತಂದೆ, ಮಗಳು  ಮೃತ್ಯು

Spread the love

ಬಂಟ್ವಾಳ: ಮುರಿದು ಬಿದ್ದಿದ್ದ ವಿದ್ಯುತ್ ತಂತಿ ತುಳಿದು ತಂದೆ, ಮಗಳು  ಮೃತ್ಯು

ಬಂಟ್ವಾಳ: ತೋಟದಲ್ಲಿ ಮುರಿದು ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ತುಳಿದು ತಂದೆ, ಮಗಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬಂಟ್ವಾಳ ತಾಲೂಕಿನ ವಾಮದಪದವು ಸಮೀಪದ ಬಾರಕಿನಡಿ ಎಂಬಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ.

ಮೃತರನ್ನು ಬಾರಕಿನಡಿ ನಿವಾಸಿಗಳಾದ ಗೋಪಾಲಕೃಷ್ಣ (63), ಇವರ ಮಗಳು ದಿವ್ಯಾಶ್ರಿ (32) ಎಂದು ತಿಳಿದುಬಂದಿದೆ.

ಮಂಗಳವಾರ ಸಂಜೆ ತಂದೆ ಮಗಳೊಂದಿಗೆ ಹುಲ್ಲು ತರಲೆಂದು ತೋಟಕ್ಕೆ ತೆರಳಿದ್ದರು. ಈ ವೇಳೆ ತೋಟದಲ್ಲಿ ಮುರಿದು ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕ ತುಳಿದು ವಿದ್ಯುತ್ ಪ್ರವಹಿಸಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಮಹಜರು ನಡೆಸಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದಾರೆ.


Spread the love

Exit mobile version