ಬಂದ್ ಗೆ ಕರೆ ನೀಡಲು ಯಾರಿಗೂ ಅವಕಾಶವಿಲ್ಲ – ಪೋಲೀಸ್ ಕಮೀಷನರ್ ಚಂದ್ರಶೇಖರ್

Spread the love

ಬಂದ್ ಗೆ ಕರೆ ನೀಡಲು ಯಾರಿಗೂ ಅವಕಾಶವಿಲ್ಲ – ಪೋಲೀಸ್ ಕಮೀಷನರ್ ಚಂದ್ರಶೇಖರ್

ಮಂಗಳೂಳು: ಬಂದ್ ಗೆ ಕರೆ ನೀಡಲು ಯಾರಿಗೂ ಅವಕಾಶವಿಲ್ಲ. ಸುಪ್ರೀಂಕೋರ್ಟ್ ನಿರ್ದೇಶನದ ಪ್ರಕಾರ ಬಂದ್ ನಡೆಸಲು ಅವಕಾಶವಿರಿವುದಿಲ್ಲ.   ಈ ಹಿನ್ನೆಲೆಯಲ್ಲಿ ಬಂದ್ ಗೆ ಕರೆ ನೀಡಿರುವ 44 ಮಂದಿಗೆ ನೋಟೀಸ್ ಜಾರಿ ಮಾಡಲಾಗಿದೆ ಎಂದು ಮಂಗಳೂರು ಪೋಲೀಸ್ ಕಮೀಷನರ್ ಚಂದ್ರಶೇಖರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಕಾನೂನು ಸುವ್ಯವಸ್ಥೆಗೆ ತೊಂದರೆ ಉಂಟು ಮಾಡಲು ಯಾರಿಗೂ ಅವಕಾಶ ನೀಡುವುದಿಲ್ಲ. ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದವರು ಸ್ಪಷ್ಟಪಡಿಸಿದರು. ಯಾವ ರೀತಿ ಬಂದ್ ಅಥವಾ ಹರತಾಳ ನಡೆಸುತ್ತಾರೆ ಎನ್ನುವ ಬಗ್ಗೆ ಸೆಕ್ಷನ್ 107ರ ಪ್ರಕಾರ ವಿವರಣೆ ಕೇಳಿ ನೋಟೀಸ್ ನೀಡಲಾಗಿದೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ನಗರಕ್ಕೆ ಆಗಮಿಸುತ್ತಿರುವ ಸಂದರ್ಭದಲ್ಲಿ ಸೂಕ್ತ ಬಂದೋಬಸ್ತು ಕಲ್ಪಿಸಲಾಗುವುದು. ಕಾರ್ಯಕ್ರಮ  ಆಯೋಜಕರಿಗೆ ಸೂಕ್ತ ರಕ್ಷಣೆ ನೀಡಲಾಗುವುದು. ಕಾನೂನುಬಾಹಿರ ಚಟುವಟಿಕೆ ನಡೆಸುವವರ ಬಗ್ಎ ನಿಗಾ ವಹಿಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಪೋಲಿಸ್ ಕಮಿಷನರ್ ತಿಳಿಸಿದ್ದಾರೆ

ಹೆಚ್ಚುವರಿ ಪೋಲೀಸರು: ದ.ಕ ಜಿಲ್ಲೆಯಲ್ಲಿ ಸೂಕ್ತ ಬಂದೋಬಸ್ತು ವ್ಯವಸ್ಥೆ ನಿರ್ವಹಿಸಲು ಹೊರ ಜಿಲ್ಲೆಗಳಿಂದ ಸುಮಾರು 2000 ಪೋಲೀಸರು, 20 ಕೆ.ಎಹ್.ಆರ್.ಪ. ಪ್ಲಟೂನ್ ಶೀಘ್ರದಲ್ಲಿ ಜಿಲ್ಲೆಗೆ ಆಗಮಿಸಿ ಕಾರ್ಯನಿರ್ವಹಿಸಲಿದ್ದಾರೆ. ಜಿಲ್ಲೆಯ 1500 ಪೋಲೀಸರನ್ನು ನಿಯೋಜಿಸಲಾಗಿದೆ ಎಂದು ಪೋಲೀಸ್ ಕಮಿಶನರ್ ವಿವರಿಸದರು


Spread the love