ಬಜೆಟ್ ನಲ್ಲಿ ಕ್ರೈಸ್ತ ಅಭಿವೃದ್ಧಿ ನಿಗಮದ ಸ್ಥಾಪನೆ; ಕಾಪು ಯುವ ಕಾಂಗ್ರೆಸ್ ಅಧ್ಯಕ್ಷ ಮೆಲ್ವಿನ್ ಡಿ’ಸೋಜ ಹರ್ಷ
ಉಡುಪಿ: ಶುಕ್ರವಾರ ಮಂಡಿಸಿದ ರಾಜ್ಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕ್ರೈಸ್ತ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಕ್ರೈಸ್ತ ಅಭಿವೃದ್ಧಿ ನಿಗಮದ ಸ್ಥಾಪನೆ ಹಾಗೂ ಅದಕ್ಕಾಗಿ 200 ಕೋಟಿ ಅನುದಾನವನ್ನು ಬಜೆಟ್ನಲ್ಲಿ ನೀಡಿರುವುದಕ್ಕೆ ಕಾಪು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಮೆಲ್ವಿನ್ ಡಿ’ಸೋಜ ಸಂತಸ ವ್ಯಕ್ತ ಪಡಿಸಿದ್ದಾರೆ.
ಕ್ರೈಸ್ತ ಅಭಿವೃದ್ಧಿ ನಿಗಮ ಘೋಷಣೆ ಮಾಡಬೇಕೆಂದು ಕಳೆದ ಹಲವಾರು ವರ್ಷಗಳಿಂದ ಹೋರಾಟ ನಡೆಸಿದ ಮುಖ್ಯಮಂತ್ರಿಯವರ ಸಂಸದೀಯಕಾರ್ಯದರ್ಶಿ ಐವನ್ ಡಿ’ಸೋಜರವರಿಗೆ ಅವರು ವಿಶೇಷ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಐವನ್ ಡಿ’ಸೋಜರವರ ನಿರಂತರ ಹೋರಾಟದ ಫಲ ಇದು ಎಂದು ಅವರು ಬಣ್ಣಿಸಿದ್ದಾರೆ.
ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆಯನ್ನು ಬಜೆಟ್ನಲ್ಲಿ ಘೋಷಿಸಿದ ಸನ್ಮಾನ್ಯ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಅವರು ಕೃತಜ್ಞತೆಯನ್ನು ಸಲ್ಲಿಸಿದ್ದಾರೆ. ನಿಗಮದ ಸ್ಥಾಪನೆಗೆ ಐವನ್ ಡಿ’ಸೋಜರವರ ಹೋರಾಟಕ್ಕೆ ಬೆಂಬಲಿಸಿದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಾ| ಜಿ. ಪರಮೇಶ್ವರ್ರವರಿಗೆ ಕೂಡಾ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
ಐವನ್ ಡಿ’ಸೋಜರವರ ಹೋರಾಟಕ್ಕೆ ಬೆಂಬಲಿಸಿದ ಎಲ್ಲ ಕ್ರೈಸ್ತ ಮುಖಂಡರಿಗೆ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಎಲ್ಲ ಕ್ರೈಸ್ತ ಮುಖಂಡರಿಗೆ ಮೆಲ್ವಿನ್ ಡಿ’ಸೋಜರವರು ಅಭಿನಂದನೆ ಸಲ್ಲಿಸಿದ್ದಾರೆ.