ಬಶೀರ್ ಹತ್ಯಾ ಯತ್ನ ; ನಾಲ್ವರು ಆರೋಪಿಗಳನ್ನು ಬಂಧಿಸಿದ ಸಿಸಿಬಿ ಪೋಲಿಸರು

Spread the love

ಬಶೀರ್ ಹತ್ಯಾ ಯತ್ನ ; ನಾಲ್ವರು ಆರೋಪಿಗಳನ್ನು ಬಂಧಿಸಿದ ಸಿಸಿಬಿ ಪೋಲಿಸರು

ಮಂಗಳೂರು: ಕಾವೂರು ಪೋಲಿಸ್ ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿ ಬಳಿ ಅಬ್ದುಲ್ ಬಶೀರ್ ಎಂಬವರ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಸಿಸಿಬಿ ಪೋಲಿಸರು ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಕಾಸರಗೋಡು ಕೃಷ್ಣನಗರದ ಶ್ರೀಜಿತ್ ಪಿ.ಕೆ. ಯಾನೆ ಶ್ರೀಜು (25), ಮಂಗಳೂರಿನ ಪಡೀಲ್ ನಿವಾಸಿ ಕಿಶನ್ ಪೂಜಾರಿ (21), ಧನುಷ್ ಪೂಜಾರಿ (22), ಮಂಜೇಶ್ವರ ಕುಂಜತ್ತೂರು ನಿವಾಸಿ ಸಂದೇಶ್ ಕೋಟ್ಯಾನ್ (22) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.

ಜನವರಿ 3 ರಂದು ರಾತ್ರಿ 10 ಗಂಟೆಯ ಸುಮಾರಿಗೆ ಕೊಟ್ಟಾರ ಚೌಕಿ ಬಳಿ ಪಾಸ್ಟ್ ಫುಡ್ ವ್ಯಾಪಾರ ನಡೆಸುತ್ತಿದ್ದ ಅಬ್ದುಲ್ ಬಶೀರ್ ಅವರಿಗೆ ಬೈಕಿನಲ್ಲಿ ಬಂದ ಆರೋಪಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದು, ಗಂಭೀರವಾಗಿ ಗಾಯಗೊಂಡ ಬಶೀರ್ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾವೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love