Home Mangalorean News Kannada News ಬಸ್ ಚಾಲಕನಿಗೆ ಚೂರಿ ಇರಿತ ಎಂದು ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ದ ಪ್ರಕರಣ ದಾಖಲು

ಬಸ್ ಚಾಲಕನಿಗೆ ಚೂರಿ ಇರಿತ ಎಂದು ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ದ ಪ್ರಕರಣ ದಾಖಲು

Spread the love
RedditLinkedinYoutubeEmailFacebook MessengerTelegramWhatsapp

ಬಸ್ ಚಾಲಕನಿಗೆ ಚೂರಿ ಇರಿತ ಎಂದು ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ದ ಪ್ರಕರಣ ದಾಖಲು

ಉಡುಪಿ: ಬಸ್ ಚಾಲಕನಿಗೆ ಚೂರಿ ಇರಿತ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ದ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೋಮವಾರ ಬೆಳಿಗ್ಗೆ ಪಡುಬಿದ್ರೆಯಲ್ಲಿ ಓವರ್ಟೇಕ್ ವಿಚಾರದಲ್ಲಿ ಎಕ್ಸ್ಪ್ರೆಸ್ ಬಸ್ ಚಾಲಕ ಶೈಲೇಂದ್ರ ಎಂಬವರಿಗೆ ಕಾರು ಚಾಲಕ ಮುಲ್ಕಿಯ ಇಸ್ಮಾಯಿಲ್ ಆತೀಕ್ ಹಲ್ಲೆ ನಡೆಸಿದ್ದಾರೆಂದು ದೂರಲಾಗಿದೆ. ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದೆ.

ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಬಸ್ ಚಾಲಕನಿಗೆ ಚೂರಿ ಇರಿತ ಎಂಬುದಾಗಿ ಸುಳ್ಳು ಸುದ್ದಿ ಹಬ್ಬಿಸಿದವರ ಮೇಲೆ ಪಡುಬಿದ್ರಿ ಪೊಲೀಸ್ ಠಾಣೆಯ ಈಗಾಗಲೇ 505(2) ರಂತೆ ಪ್ರಕರಣ ದಾಖಲಾಗಿದ್ದು, ಮುಂದಕ್ಕೆ ಈ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣ ಗಳಲ್ಲಿ ಹಬ್ಬಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ


Spread the love
RedditLinkedinYoutubeEmailFacebook MessengerTelegramWhatsapp

Exit mobile version