ಬಸ್ ಚಾಲಕನ ಧಾವಂತಕ್ಕೆ ಅಪಘಾತ: ಇಬ್ಬರಿಗೆ ಗಂಭೀರ ಗಾಯ – ಎಬಿವಿಪಿ ವಿದ್ಯಾರ್ಥಿಗಳ ಆಕ್ರೋಶ

Spread the love

ಬಸ್ ಚಾಲಕನ ಧಾವಂತಕ್ಕೆ ಅಪಘಾತ: ಇಬ್ಬರಿಗೆ ಗಂಭೀರ ಗಾಯ – ಎಬಿವಿಪಿ ವಿದ್ಯಾರ್ಥಿಗಳ ಆಕ್ರೋಶ

ಮಂಗಳೂರು: ಮಂಗಳೂರಿನಿಂದ ಮೂಡಬಿದ್ರೆ ಗೆ ಹೋಗುತ್ತಿದ್ದ ಖಾಸಗಿ ಬಸ್‌ ಓವರ್ ಟೆಕ್ ಭರದಲ್ಲಿ ಅಪಘಾತ ನಡೆದಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಬಸ್ ಚಾಲಕನ ವಿರುದ್ಧ ಎಬಿವಿಪಿ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.

ಮಂಗಳೂರಿನಿಂದ ಮೂಡಬಿದ್ರೆ ಗೆ ಹೋಗುತ್ತಿದ್ದ ಖಾಸಗಿ ಬಸ್‌ ತೊಡಾರ್   ಕಾಲೇಜ್ ಬಳಿ ಕಾಲೇಜಿನ ಬಸ್ಸನ್ನು ಓವರ್ ಟೇಕ್ ಮಾಡುವ ಸಂದರ್ಭ ಈ ಘಟನೆ ನಡೆದಿದೆ.

ಸದ್ಯ ಗಂಭೀರ ಗಾಯಗೊಂಡ ಮಹಿಳೆ ಹಾಗೂ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ ವಿದ್ಯಾರ್ಥಿಗಳು ಬಸ್ ನ ಗಾಜುಗಳನ್ನು ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.


Spread the love