ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Spread the love

ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

ಮಂಗಳೂರು: ಹಿಂದೂಗಳನ್ನು ಹೊರ ದಬ್ಬುವ ಷಡ್ಯಂತ್ರ ನಡೆಯುತ್ತಿದೆ. ಜಗತ್ತಿನಲ್ಲಿ ಶಾಂತಿಗಾಗಿ ಹುಟ್ಟಿದ ಇಸ್ಕಾನ್ ಸಂಸ್ಥೆ ಜಗತ್ತಿನ ಜನರ ಪ್ರೀತಿ ಗಳಿಸಿದೆ. ಬಡವರ ಸೇವೆ, ಮಾಡುತ್ತಿರುವ ಇಸ್ಕಾನ್ ನ ಸ್ವಾಮಿಗಳನ್ನು ಏನೂ ಕಾರಣ ಕೊಡದೆ ಬಾಂಗ್ಲಾದಲ್ಲಿ ಬಂಧಿಸಿದ್ದಾರೆ. ಅಲ್ಲಿನ ಸರಕಾರ. ನ್ಯಾಯಾಲಯ ಅಲ್ಲಿನ ಅಲ್ಪಸಂಖ್ಯಾಕರಾದ ಹಿಂದೂಗಳ ವಿರೋಧಿಯಾಗಿದೆ. ಬಾಂಗ್ಲಾದ ಹಿಂದೂಗಳು ಶಾಂತಿಯಿಂದ ಬದುಕಲು ಅವಕಾಶ ನೀಡಬೇಕು. ಇಲ್ಲವಾದರೆ ಮುಂದಿನ ಪರಿಣಾಮಗಳಿಗೆ ಬಾಂಗ್ಲಾ ಸರಕಾರವೇ ಹೊಣೆಯಾಗುತ್ತದೆ. ಬಂಧಿತರನ್ನು ಭೇಷರತ್ತಾಗಿ ಬಿಡುಗಡೆ ಗೊಳಿಸಬೇಕು ಎಂದು ಹೇಳಿದರು.

ಧಾರ್ಮಿಕ ಮುಖಂಡ ಚಿನ್ಮಯ ಕೃಷ್ಣದಾಸ ಪ್ರಭು ಅವರನ್ನು ಬಿಡುಗಡೆಗೊಳಿಸಬೇಕು, ಬಾಂಗ್ಲಾದ ಹಿಂದೂಗಳಿಗೆ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ಶುಕ್ರವಾರ(ನ.29) ಮಂಗಳೂರಿನ ಮಿನಿ ವಿಧಾನ ಸೌಧದ ಎದುರು ಪ್ರತಿಭಟನೆ ನಡೆಯಿತು.

ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ, ಇಸ್ಕಾನ್‌ನ ಪ್ರೇಮಭಕ್ತಿ ಪ್ರಭು, ಓಂ ಶ್ರೀ ಮಠದ ವಿದ್ಯಾನಂದ ಸರಸ್ವತಿ ಸ್ವಾಮೀಜಿ, ಇಸ್ಕಾನ್‌ನ ಸಚ್ಚಿದಾನಂದ ಅತಾ ದಾಸ್, ಪ್ರಮುಖರಾದ ಗೋಪಾಲ ಕುತ್ತಾರ್, ಎಚ್. ಕೆ ಪುರುಷೋತ್ತಮ, ಕೃಷ್ಣ ಪ್ರಸನ್ನ, ಶಿವಾನಂದ ಮೆಂಡನ್, ಪೊಳಲಿ ಗಿರಿಪ್ರಕಾಶ್ ತಂತ್ರಿ, ಭುಜಂಗ ಕುಲಾಲ್ ಪುನಿತ್ ಅತ್ತಾವರ, ಶರಣ್ ಪಂಪ್‌ವೆಲ್, ಗಣೇಶ್ ಪೊದುವಾಳ್, ಶಕೀಲಾ ಕಾವಾ, ಪ್ರೇಮಾನಂದ ಶೆಟ್ಟಿ ಮತ್ತಿತರರು ಭಾಗವಹಿಸಿದ್ದರು.


Spread the love