ಬಾರ್ಕೂರು ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ನೀರಿಗೆ ಬಿದ್ದು ಸಾವು
ಉಡುಪಿ: ನದಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವನಪ್ಪಿದ ಹೃದಯವಿದ್ರಾವಕ ಘಟನೆ ಬಾರ್ಕೂರಿನ ಹಾಲೆಕೊಡಿ ನದಿಯಲ್ಲಿ ಶುಕ್ರವಾರ ಸಂಭವಿಸಿದೆ.
ಮೃತ ಯುವಕರನ್ನು ಬಾರ್ಕೂರು ಹೊಸಾಳ ಗ್ರಾಮದ ಹರ್ಷ (25) ಮತ್ತು ಕಾರ್ತಿಕ್ (21) ಎಂದು ಗುರುತಿಸಲಾಗಿದೆ.
ಯುವಕರು ನಿನ್ನೆ ರಾತ್ರಿ ನದಿಯಲ್ಲಿ ಬಲೆ ಬೀಸಿ ಹೋಗಿದ್ದು ಶುಕ್ರವಾರ ಮುಂಜಾನೆ ಅದನ್ನು ತರಲು ತೆರಳಿದ್ದು ನೀರಿನಲ್ಲಿ ಇಳಿದು ಬಲೆಯನ್ನು ಎಳೆಯುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿ ಸಾವನಪ್ಪಿದ್ದಾರೆ ಎನ್ನಲಾಗಿದೆ.
ಮೃತ ಹರ್ಷ ಖಾಸಗಿ ಫೆನ್ಸಾನ್ಸ್ ಕಂಪೆನಿಯಲ್ಲಿ ರಿಕವರಿ ಕೆಲಸ ಮಾಡಿಕೊಂಡಿದ್ದು, ಕಾರ್ತಿಕ್ ಕೊನೆಯ ವರ್ಷದ ಬಿಕಾಂ ವಿದ್ಯಾರ್ಥಿಯಾಗಿದ್ದರು.
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ