ಬಾಲಕನಿಗೆ ‘ಜೈ ಶ್ರೀರಾಂ’ ಹೇಳಲು ಬಲವಂತಪಡಿಸಿ ಹಲ್ಲೆ: ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು
ಬಂಟ್ವಾಳ :ಮೇ21 ರಂದು ಸಮಯ ಸುಮಾರು 11.00 ಗಂಟೆಗೆ ಪ್ರಕರಣದ ಪಿರ್ಯಾದಿ 16 ವರ್ಷ ಪ್ರಾಯದ ಅಪ್ರಾಪ್ತ ಬಾಲಕನು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ಕೊಲ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿ ದಿನೇಶ ಕನ್ಯಾನ ಮತ್ತು ಸುಮಾರು 16-17 ವರ್ಷ ಪ್ರಾಯದ ಕಾನೂನು ಸಂಘರ್ಷಕ್ಕೊಳಗಾದ ಮೂವರು ಬಾಲಕರು 2 ಮೋಟಾರು ಸೈಕಲಿನಲ್ಲಿ ಬಂದು ಪಿರ್ಯಾದಿ ಬಾಲಕನನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿರುವುದಲ್ಲದೆ ಬಳಿಕ ಬಾಲಕನನ್ನು ಮೋಟಾರು ಸೈಕಲಿನಲ್ಲಿ ಕುಳ್ಳಿರಿಸಿ ಸ್ಥಳಿಯ ಶಾಲಾ ಮೈದಾನಕ್ಕೆ ಕೊಂಡೋಯ್ದು ಅವಾಚ್ಯ ಶಬ್ದಗಳಿಂದ ಬೈದು ಜೀವಬೆದರಿಕೆ ಹಾಕಿ ಹಲ್ಲೆ ನಡೆಸಿ ಪಿರ್ಯಾದಿಯ ಜೇಬಿನಲ್ಲಿದ್ದ ಹಣವನ್ನು ಕಸಿದುಕೊಂಡಿರುವುದಾಗಿದೆ. ಪಿರ್ಯಾಧಿ ಬಾಲಕನು ಆರೋಪಿಗಳ ಭಯದಿಂದ ತಡವಾಗಿ ದೂರು ನೀಡಿದ್ದು ದಿನಾಂಕ 28.05.2020 ರಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ಕಲಂ 341, 367, 325, 394, 504, 506, ಜೊತೆಗೆ 34 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಗತಿಯಲ್ಲಿದ್ದು, ಆರೋಪಿಗಳ ಪತ್ತೆಗಾಗಿ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರ ನೇತೃತ್ವದ ತಂಡವನ್ನು ರಚಿಸಲಾಗಿರುತ್ತದೆ.
ಬಾಲಕನೊಬ್ಬನಿಗೆ ಹಲ್ಲೆ ನಡೆಸಿ, ಜೈ ಶ್ರೀರಾಂ ಎಂದು ಹೇಳಲು ಬಲವಂತಪಡಿಸಿದ ಆರೋಪದ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯ ವಿರುದ್ದ ಮೆಲ್ಕಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಲಕನೊಬ್ಬನಿಗೆ ಹಲ್ಲೆ ನಡೆಸಿ, ಜೈ ಶ್ರೀರಾಂ ಎಂದು ಹೇಳಲು ಬಲವಂತಪಡಿಸುತ್ತಿರುವ ವಿಡಿಯೋವೊಂದು ವೈರಲ್ ಆಗಿದ್ದು, ಕುಡ್ತಮುಗೇರುವಿನ ಬಾಲಕನೊಬ್ಬನಿಗೆ ಈತ ಶಾಲೆಯ ಮೈದಾನವೊಂದರಲ್ಲಿ ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಇಂದು ವೈರಲ್ ಆಗಿದೆ.
ಹಲ್ಲೆ ನಡೆಸಿದ ವ್ಯಕ್ತಿ ದಿನೇಶ್ ಕನ್ಯಾನ ಎಂದು ಗುರುತಿಸಲಾಗಿದ್ದು ಈತನ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.